ಕಾರವಾರ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಶಂಕೆ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಶಂಕೆ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಲೋಕದರ್ಶನ ವರದಿ

                                                            ದಾಂಡೇಲಿಯಲ್ಲಿ ಟೀಫಿನ್ ಹೌಸ್‌ನಲ್ಲಿ ಅಗ್ನಿ ಅವಘಡ  

ದಾಂಡೇಲಿ, ಆ. 3: ನಗರದ ಸ್ಥಳೀಯ ಬಸ್ ನಿಲ್ದಾಣದ ಸಮೀಪವಿರುವ ಅರ​‍್ಿತಾ ಟೀಫಿನ್ ಹೌಸ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಹೋಟೆಲ್ನಲ್ಲಿದ್ದ ಸಾಮಗ್ರಿಗಳು ಬೆಂಕಿಗಾಹುತಿಯಾಗಿ ಭಸ್ಮವಾಗಿವೆ.  

ಬೆಳಗಿನ ಜಾವ ಸುಮಾರು 3.30 ಗಂಟೆ ವೇಳೆಗೆ ಸ್ಫೋಟದಂತಹ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಹೊರಬಂದು ನೋಡಿದಾಗ ಹೋಟೆಲ್ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿತು. ತಕ್ಷಣವೇ ಸಾರ್ವಜನಿಕರು ಪೊಲೀಸ್ ಇಲಾಖೆ, ಕೆಇಬಿ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.  

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ಪಕ್ಕದ ಅಂಗಡಿಗಳಿಗೆ ವ್ಯಾಪಿಸದಂತೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.  ಪ್ರಾಥಮಿಕ ಪರೀಶೀಲನೆಯ ಪ್ರಕಾರ, ಹೋಟೆಲ್ ಒಳಭಾಗದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.  

ಘಟನಾ ಸ್ಥಳದ ಪಕ್ಕದ ಶಟರ್ ಅರ್ಧ ತೆರೆದ ಸ್ಥಿತಿಯಲ್ಲಿ ಕಂಡುಬಂದಿರುವುದರಿಂದ ಅಗ್ನಿ ಅವಘಡದ ಕುರಿತು ವಿವಿಧ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸ್ಥಳ ಪರೀಶೀಲನೆ ನಡೆಸಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ. 


ಸುದ್ದಿ ಓದಿ