ವಿಜಯಪುರ

ಅಗ್ನಿಶಾಮಕ ದಳದಿಂದ ಬೆಂಕಿ ನಿಯಂತ್ರಣ; ದೊಡ್ಡ ಅನಾಹುತ ತಪ್ಪಿತು

ಅಗ್ನಿಶಾಮಕ ದಳದಿಂದ ಬೆಂಕಿ ನಿಯಂತ್ರಣ; ದೊಡ್ಡ ಅನಾಹುತ ತಪ್ಪಿತು

ಕೊಲ್ಹಾರ   23: ತಾಲೂಕಿನ ಮುಳವಾಡ ಗ್ರಾಮದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಬೆಂಕಿ ತಗುಲಿದೆ ಎಂದು ಶಂಕೆ ವ್ಯಕ್ತವಾಗಿದ್ದು ಘಟನೆಯಲ್ಲಿ ಹಲವು ಪ್ರಮುಖ ದಾಖಲೆಗಳು, ಕಂಪ್ಯೂಟರ್‌ಗಳು ಸೇರಿದಂತೆ ಹಲವು ಪೀಠೋಪಕರಣಗಳು ಸುಟ್ಟು ಭಸ್ಮವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದಾಗ್ಯೂ ಬೆಂಕಿಯ ಕೆನ್ನಾಲಿಗೆಗೆ ಬ್ಯಾಂಕ್‌ನಲ್ಲಿದ್ದ ಪ್ರಮುಖ ಕಂಪ್ಯೂಟರ್‌ಗಳು, ಪೀಠೋಪಕರಣಗಳು ಹಾಗೂ ಇತರೆ ದಾಖಲೆ ವಸ್ತುಗಳು ಹಾನಿಗೊಳಗಾಗಿವೆ.ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಆಸ್ತಿ ನಷ್ಟದ ಪ್ರಮಾಣವನ್ನು ಸಂಬಂಧಪಟ್ಟ ಅಧಿಕಾರಿಗಳು ಪರೀಶೀಲಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ 


ಸುದ್ದಿ ಓದಿ