ರಾಷ್ಟ್ರೀಯ

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿ

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿ

ಶ್ರೀನಗರ, ಡಿಸೆಂಬರ್.24: ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ರೈಫಲ್ಸ್ (ಆರ್ ಆರ್), ಜಮ್ಮು ಮತ್ತು ಕಾಶ್ಮೀರದ ವಿಶೇಷ ಪೊಲೀಸ್ ಪಡೆ ಮತ್ತು ಸಿಆರ್ ಪಿಎಫ್ ಜಂಟಿಯಾಗಿ ಬಾರಮುಲ್ಲಾದ ವನಿಗಮ್ ಪಯೀನ್ ಕ್ರೀರಿ ಗ್ರಾಮದಲ್ಲಿ ಶೋಧ ಕಾರ್ಯ ಆರಂಭಿಸಿದೆ.

ಗ್ರಾಮಕ್ಕೆ ಬರುವ ಎಲ್ಲಾ ಮಾರ್ಗಗಳನ್ನು ಮುಚ್ಚಿ ಮನೆ ಮನೆ ಶೋಧ ನಡೆಸಲಾಯಿತು. ಇಂದು ಬೆಳಗ್ಗಿನ ಜಾವ ಅಡಗಿ ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಗುಂಡಿನ ಚಕಮಕಿ ನಡೆಯಿತು ಎಂದು ಅವರು ತಿಳಿಸಿದ್ದಾರೆ.

ಅಲ್ಲಿಂದ ಕೊನೆಯ ಬಾರಿಗೆ ವರದಿ ಬಂದಾಗಲೂ ಗುಂಡಿನ ಚಕಮಕಿ ನಡೆಯುತ್ತಿತ್ತು. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಪ್ರದೇಶದಲ್ಲಿ ಯಾವುದೇ ಪ್ರತಿಭಟನೆ ನಡೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಓದಿ