ರಾಜ್ಯಕ್ಕೆ ಪ್ರಥಮ ಮತ್ತು ನಾಲ್ಕನೆಯ ರಾ್ಯಂಕ್
First and fourth rank for the state
ಸಿಂದಗಿ 21: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿ ನಡೆಯುವ ಸಿಂದಗಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು 2024-25ನೆಯ ಸಾಲಿನ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಕೊಡ ಮಾಡುವ ಹತ್ತು ರಾ್ಯಂಕಗಳಲ್ಲಿ ಬಿ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿನಿಯರಾದ ಮೀನಾಜ ಗೋಲಗೇರಿ ರಾಜ್ಯಕ್ಕೆ ಪ್ರಥಮ ರಾ್ಯಂಕ್, ರೀಯಾನಾಬೇಗಂ ಬಂಕಲಗಿ ನಾಲ್ಕನೆಯ ರಾ್ಯಂಕ್ ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿನಿಯರ ಕಠಿಣ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆ ರಾ್ಯಂಕ್ಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್‌ರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹಾಗೂ ಉತ್ತರಾಧಿಕಾರಿಗಳಾದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು, ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿನಿಯರಿಗೆ ಶುಭ ಕೋರಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 