ಮುಂಗಾರಿನ ಮೊದಲ ಮಳೆ ಅಬ್ಬರಕ್ಕೆ ಬಳ್ಳಾರಿಯಲ್ಲಿ ಭಾರಿ ಅವಾಂತರಗಿಡ-ಮರಗಳು ಧರೆಗೆ, ಮನೆ ಕುಸಿತ, ವಿದ್ಯುತ್ ವ್ಯತ್ಯಯ
First monsoon rains cause major disruption in Bellary - trees uprooted, houses collapsed, power outa
ಬಳ್ಳಾರಿ 20: ಪ್ರಸಕ್ತ ಮುಂಗಾರಿನ ಮೊದಲ ಮಳೆಯು ಬಳ್ಳಾರಿ ನಗರಕ್ಕೆ ತಂಪು ತಂದಿದ್ದರೂ, ಅದರೊಂದಿಗೆ ಸಾಕಷ್ಟು ಅವಾಂತರಗಳನ್ನೂ ಸೃಷ್ಟಿಸಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ನಗರದ ವಿವಿಧ ಭಾಗಗಳಲ್ಲಿ ಗಿಡ-ಮರಗಳು ಧರೆಗೆ ಉರುಳಿದ್ದು, ಕೆಲವು ಮನೆಗಳು ಕುಸಿದಿರುವ ಘಟನೆಗಳು ವರದಿಯಾಗಿವೆ. ತಗ್ಗು ಪ್ರದೇಶಗಳಲ್ಲಿನ ಮನೆಗಳು ಹಾಗೂ ಅಂಗಡಿ ಮಳಿಗೆಗಳಿಗೆ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಅಂದಾಜು 40 ಮಿ.ಮೀ. ಮಳೆಯಾಗಿರುವುದಾಗಿ ತಿಳಿದುಬಂದಿದ್ದು, ಹಲವೆಡೆ ನೀರು ಸರಾಗವಾಗಿ ಹರಿಯದೇ ರಸ್ತೆಗಳಲ್ಲೇ ಮಡುಗಟ್ಟಿದೆ.
ಪರಿಣಾಮ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.ನಗರದ ಹಲವು ಪ್ರದೇಶಗಳಲ್ಲಿ ತೆರೆದ ಚರಂಡಿಗಳನ್ನು ಮಹಾನಗರ ಪಾಲಿಕೆ ಸಮರ್ಕವಾಗಿ ಸ್ವಚ್ಛಗೊಳಿಸದ ಕಾರಣ ಮಳೆ ನೀರು ಚರಂಡಿಗಳಲ್ಲಿ ಹರಿಯದೇ ರಸ್ತೆಗಳ ಮೇಲೆ ಹರಿದು ಮನೆ ಹಾಗೂ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿತು. ಸಾರ್ವಜನಿಕರು ಪಾಲಿಕೆಯ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ಬಿರುಗಾಳಿಯ ಅಬ್ಬರಕ್ಕೆ ಎಪಿಎಂಸಿ ಸೇರಿದಂತೆ ನಗರದ ಅನೇಕ ಕಾಲೋನಿಗಳಲ್ಲಿ 500ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಕೆಲವೆಡೆ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಬಿಸಿಲಿನ ತಾಪದಿಂದ ರಕ್ಷಣೆಗಾಗಿ ಕ್ಯಾಂಟೋನ್ಮೆಂಟ್ ಪ್ರದೇಶದ ಬಳಿ ಅಳವಡಿಸಿದ್ದ ಹಸಿರು ಪರದೆ ವ್ಯವಸ್ಥೆಯೂ ಗಾಳಿಯ ಹೊಡೆತಕ್ಕೆ ಕುಸಿದು ಬಿದ್ದಿದೆ.ಇನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆ ನೀರು ಹೊರಹೋಗುವ ಸಮರ್ಕ ವ್ಯವಸ್ಥೆಯ ಕೊರತೆಯಿಂದ ಸಿಂಥಟಿಕ್ ಟ್ರಾಕ್ ಸೇರಿದಂತೆ ಕ್ರೀಡಾಂಗಣದ ಸುತ್ತಮುತ್ತ ನೀರು ನಿಂತಿರುವುದು ಕಂಡುಬಂದಿದೆ. ಇದರಿಂದ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಭಾರೀ ಗಾಳಿಗೆ ನಗರದ ವಿವಿಧ ಭಾಗಗಳಲ್ಲಿ 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.
ಪರಿಣಾಮ ಅನೇಕ ಪ್ರದೇಶಗಳಲ್ಲಿ ರಾತ್ರಿ ಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಿ ಜನರು ಕತ್ತಲಲ್ಲೇ ಕಾಲ ಕಳೆಯಬೇಕಾಯಿತು. ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಹರಸಾಹಸ ಪಡುತ್ತಿರುವುದು ಕಂಡುಬಂದಿತು.ಮಳೆಯಿಂದ ಉಂಟಾದ ಅವಾಂತರಗಳನ್ನು ಸರಿಪಡಿಸುವ ಕಾರ್ಯವನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದು, ಮರ ತೆರವು, ವಿದ್ಯುತ್ ಸಂಪರ್ಕ ದುರಸ್ತಿ ಹಾಗೂ ರಸ್ತೆ ಸ್ವಚ್ಛತಾ ಕಾರ್ಯ ಭರದಿಂದ ಸಾಗುತ್ತಿದೆ.ನಗರದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಮಹಾನಗರ ಪಾಲಿಕೆ ಈಗಲೇ ತೆರೆದ ಚರಂಡಿಗಳು ಹಾಗೂ ರಾಜಕಾಲುವೆಗಳಲ್ಲಿನ ಹೂಳು ತೆರವು ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 