ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ
ಮುಂಡರಗಿ27 : ಗದಗ ನಗರದ ಎಚ್.ಕೆ.ಪಾಟೀಲ್ ಕ್ರೀಡಾಂಗಣದಲ್ಲಿ ಅ.26 ರಂದು ನಡೆದ ಜಿಲ್ಲಾಮಟ್ಟದ ಮೇರಾಟ ಸ್ಪರ್ಧೆಯ 100ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸ್ಥಳಿಯ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ ವಿದ್ಯಾರ್ಥಿ ಬಸವರಾಜ ಹೊಂಬಳ ಇವರು ಜಿಲ್ಲಾಮಟ್ಟದ 100ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆಯುವದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಯನ್ನು ಶಾಲೆಯ ಎಸ್.ಡಿ.ಎಂ.ಸಿ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.