ಬಳ್ಳಾರಿ

ಶ್ರೀ ಮಾತಾ ಪದವಿ ಕಾಲೇಜಿನ ಬಿಬಿಎ ಮತ್ತು ಬಿಸಿಎ ವಿಭಾಗಗಳಲ್ಲಿ ಪ್ರಥಮ ರ್ಯಾಂಕ್

ಶ್ರೀ ಮಾತಾ ಪದವಿ ಕಾಲೇಜಿನ  ಬಿಬಿಎ ಮತ್ತು ಬಿಸಿಎ ವಿಭಾಗಗಳಲ್ಲಿ ಪ್ರಥಮ ರ್ಯಾಂಕ್


           ಬಳ್ಳಾರಿ. ನ. 17 : ಹೊಸಪೇಟೆಯ ಶ್ರೀ ಮಾತಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬಿಸಿಎ ವಿಭಾಗದಲ್ಲಿ ಕು. ದಿಶಾ ಯೇಕುಂಡೆ ಅವರು ಪ್ರಥಮ ರ್ಯಾಂಕ್ ಹಾಗೂ ಬಿಬಿಎ ವಿಭಾಗದಲ್ಲಿ ಕು. ಕೀರ್ತನಾ ಜಿ.ಕೆ. ಅವರು ಪ್ರಥಮ ರ್ಯಾಂಕ್ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

               ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಡಾ. ಸುಧಾ ಯಾದವ್ ಅವರ ಅಮೃತಹಸ್ತದಿಂದ ಇಬ್ಬರೂ ವಿದ್ಯಾರ್ಥಿನಿಯರು ಚಿನ್ನದ ಪದಕವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಮುನಿರಾಜು, ಕುಲಸಚಿವರಾದ ಪ್ರೊ. ಲೋಕೇಶ್ ಪಿ., ಮೌಲ್ಯಮಾಪನ ಕುಲಸಚಿವರಾದ ಪ್ರೊ. ಕಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

            ಶ್ರೀ ಮಾತಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕಾಂಡ್ರ ಸತೀಶ್  ಹಾಗೂ ನಿರ್ದೇಶಕರಾದ  ಸಾಗರ್ ಅವರು ಘಟಿಕೋತ್ಸವ ಸಮಾರಂಭದಲ್ಲಿ ಉಪಸ್ಥಿತರಿದ್ದು, ಕಾಲೇಜಿನ ಪ್ರಾಂಶುಪಾಲರಾದ ಜಾಫರ್ ಅವರೊಂದಿಗೆ ವಿದ್ಯಾರ್ಥಿನಿಯರ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

            ವಿದ್ಯಾರ್ಥಿನಿಯರ ಈ ಸಾಧನೆಗೆ ಶ್ರೀ ಮಾತಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ