ಬಳ್ಳಾರಿ

23ರಿಂದ ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ

23ರಿಂದ ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ

ಬಳ್ಳಾರಿ 06: ಜಿಲ್ಲೆಯಲ್ಲಿ ಇದೇ ಜ.23ರಿಂದ 26ರವರೆಗೆ ಮೊದಲ ಸುತ್ತಿನ ಪಲ್ಸ್‌ ಪೊಲೀಯೋ ಲಸಿಕಾ ಅಭಿಯಾನ ನಡೆಯಲಿದ್ದು, ಎಲ್ಲರು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ​‍್ಕವಾಗಿ ನಿಭಾಯಿಸಬೇಕು. ಈ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು.  

ಪಲ್ಸ್‌ ಪೊಲೀಯೋ ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಏರಿ​‍್ಡಸಿದ್ದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಜ.23ರಂದು ಲಸಿಕಾ ಕಾರ್ಯಕ್ರಮ ಕೈಗೊಳ್ಳಲು ಬೂತ್ ಗುರುತಿಸಿದ ಶಾಲಾ ಕೊಠಡಿಗಳನ್ನು ತೆರದಿಡುವುದು ಹಾಗೂ ಕೊಠಡಿಯನ್ನು ಸಜ್ಜುಗೊಳಿಸುವುದು. ಲಸಿಕೆ ಕಾರ್ಯಕ್ರಮವು ಪ್ರೌಢಶಾಲೆ ಹಾಗೂ ಕಾಲೇಜುಗಳು ಇದ್ದ ಕಡೆ ಎನ್‌.ಎಸ್‌.ಎಸ್ ಮತ್ತು ಎನ್‌.ಸಿ.ಸಿ ವಿದ್ಯಾರ್ಥಿಗಳನ್ನು ನಿಯೋಜಿಸಲು ಕ್ರಮವಹಿಸಬೇಕು ಎಂದರು. 

ರೈಲ್ವೆ ಇಲಾಖೆಯವರು ಪೋಲಿಯೋ ಲಸಿಕೆಯನ್ನು ಹಾಕುವವರು ರೈಲ್ವೆ ನಿಲ್ದಾಣಗಳಲ್ಲಿ ಸತ್ರ ನಡೆಸಲು ಸಹಕರಿಸುವುದು. ಹಾಗೂ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮದ ಬಗ್ಗೆ ಅಗಾಗ್ಗೆ ಪ್ರಕಟಣೆ ಹೊರಡಿಸಬೇಕು ಎಂದರು. 

ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುಚ್ಛಕ್ತಿಯ ಅವಶ್ಯಕತೆ ಇರುವುದರಿಂದ ನಗರ ಮತ್ತು ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಪ್ರದೇಶಗಳಲ್ಲಿ ಜ.21ರಿಂದ ಜ.26ರವರೆಗೆ ವಿದ್ಯುಚ್ಛಕ್ತಿ ನಿರಂತರವಾಗಿ ಸರಬರಾಜು ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅವರು ತಿಳಿಸಿದರು. 

ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಸಾರಿಗೆ ಇಲಾಖೆ ವತಿಯಿಂದ ಸುಮಾರು 168 ವಾಹನಗಳನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ಅವರು ಸೂಚಿಸಿದರು. 

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು, ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ವಿತರಿಸುವುದು. ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಕ್ಷೇತ್ರದಲ್ಲಿ ಹಾಜರಿದ್ದು ಕಾರ್ಯಕ್ರಮ ಅನುಷ್ಠಾನ ಉಸ್ತುವಾರಿ ವಹಿಸಿಕೊಳ್ಳಲು ಮನವಿ ಮಾಡಿಕೊಳ್ಳಲು ಸೂಚಿಸಿದರು. 

ಕೋವಿಡ್‌-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆಗಳೊಂದಿಗೆ ಪ್ರತಿಯೊಬ್ಬರು ಕಾರ್ಯನಿರ್ವಹಿಸಿ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಿ ಎಂದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್‌.ಎಲ್ ಜನಾರ್ಧನ್ ಅವರು ಮಾತನಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಈ ಪಲ್ಸ್‌ ಪೊಲೀಯೊ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.  

ಈ ದಿಸೆಯಲ್ಲಿ ಹುಟ್ಟಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪೋಲಿಯೋ ಲಸಿಕೆ ಲಭ್ಯವಾಗುವಂತೆ ಸೂಕ್ತ ಕ್ರಿಯಾಯೋಜನೆ ರಚಿಸಿಕೊಂಡು ಕ್ರಮವಹಿಸಬೇಕು ಎಂದರು. 

ವಲಸೆ ಬಂದ ಮಕ್ಕಳಲ್ಲಿ ಮಾತ್ರ ಕೆಲ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಲಸಿಕಾ ಕಾರ್ಯಕ್ರಮದ ತಯಾರಿ ಮಾಡಿಕೊಂಡಿದ್ದು ಅದೇ ರೀತಿ ಜಿಲ್ಲೆಯ ಪ್ರತಿ ತಾಲೂಕಿನ ಆರೋಗ್ಯಾಧಿಕಾರಿಗಳಿಗೆ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಬೇಕಾದ ಸೌಲಭ್ಯಗಳ ಕುರಿತಾದ ಮಾಹಿತಿ ಹಾಗೂ ಸಲಕರಣೆಗಳ ಕುರಿತಾದ ವಿಷಯಗಳನ್ನು ಪ್ರಸ್ತಾಪ ಮಾಡಿದರು.  

ಈ ಸಂದರ್ಭದಲ್ಲಿ ಜಿಪಂ ಸಿಇಒ ನಂದಿನಿ ಕೆ.ಆರ್, ವಿಮ್ಸ್‌ ನಿರ್ದೇಶಕ ಗಂಗಾಧರ ರೆಡ್ಡಿ,  ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪ, ಕಾರ್ಯಕ್ರಮ ಸಂಯೋಜನಾಧಿಕಾರಿ ರಾಘವೇಂದ್ರ ಹಾಗೂ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಹನುಮಂತಪ್ಪ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ಸಾರಿಗೆ, ಶಿಕ್ಷಣ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು. 


ಸುದ್ದಿ ಓದಿ