ದೌಲತವಾಡಿ ಉರ್ದು ಶಾಲೆಗೆ ಐದು ನೂತನ ಕೊಠಡಿಗಳ ಮಂಜೂರು
Five New Classrooms Sanctioned for Daulatwadi Urdu School
ವಿಜಯಪುರ, ಆ. 19: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸತತ ಪ್ರಯತ್ನದ ಫಲವಾಗಿ ನಗರದ ದೌಲತವಾಡಿಯ ಸರ್ಕಾರಿ ಉರ್ದು ಎಂ.ಪಿ.ಎಸ್. ಶಾಲೆ ನಂ. 1ರ ಬಾಲಕಿಯರ ತರಗತಿಗಳಿಗಾಗಿ ಐದು ನೂತನ ಕೊಠಡಿಗಳನ್ನು ಸರ್ಕಾರ ಮಂಜೂರು ಮಾಡಿದೆ.
ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ರೂ. 85.75 ಲಕ್ಷ ಅನುದಾನ ಬಿಡುಗಡೆ ಮಾಡಿದೆ. 2025ರಲ್ಲಿ ಇದೇ ಶಾಲೆಯ ಆವರಣದಲ್ಲಿ ಕಟ್ಟಡ ಕುಸಿದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಂ. ಬಿ. ಪಾಟೀಲ ಅವರು ಸ್ಥಳೀಯರ ಬೇಡಿಕೆಯಂತೆ ಹೊಸ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿ ಅವರ ಗಮನಕ್ಕೆ ವಿಷಯವನ್ನು ತಂದು, ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ ದೊರಕಿಸಲು ಸಚಿವರು ಸತತ ಪ್ರಯತ್ನ ನಡೆಸಿದ್ದರು. ಇದೀಗ ಅವರ ಪ್ರಯತ್ನದ ಫಲವಾಗಿ ಐದು ಕೊಠಡಿಗಳಿಗೆ ಸರ್ಕಾರ ಮಂಜೂರಾತಿ ನೀಡಿದೆ.
ಶಾಲೆಗೆ ನೂತನ ಕೊಠಡಿಗಳು ಮಂಜೂರಾಗಿರುವುದಕ್ಕೆ ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ನುಡಿದಂತೆ ನಡೆದು ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ನೆರವಾದ ಸಚಿವ ಎಂ. ಬಿ. ಪಾಟೀಲ ಹಾಗೂ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 