ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಗೆ ಆಶಾಕಿರಣ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅಭಿಮತ
Five guarantee schemes are a ray of hope for the people of the country, says Nagathana MLA Viththala
ಲೋಕದರ್ಶನ ವರದಿ
32 ವಿಕಲಚೇತನರಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರ ಸಮಾರಂಭ
ವಿಜಯಪುರ,ಮೇ.12: ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನು ತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನ ಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ದೊಂಡಿಬಾ ಕಟಕದೊಂಡ ಹೇಳಿದರು.
ಮಂಗಳವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಗಂಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಜನರ ಹಿತದಿಂದ ಇಂತಹ ಜನಪ್ರಿಯ ಹಾಗೂ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಯಾವುದೇ ಕಾರ್ಯ ಶುದ್ಧ ಹಾಗೂ ನಿಷ್ಕಲ್ಮಷ ಮನಸ್ಸಿನಿಂದ ಮಾಡಿದರೆ ಅದು ಫಲ ಕೊಟ್ಟೇ ಕೊಡುತ್ತದೆ. ನಮ್ಮ ಸರಕಾರ ಶುದ್ದ ಮನಸ್ಸಿನಿಂದ ಈ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರಿಂದ ರಾಜ್ಯದ ಬಹುತೇಕ ಬಡವರಿಗೆ ಈ ಯೋಜನೆಗಳು ವರದಾನವಾಗಿವೆ ಎಂದರು.
ನಮ್ಮ ಸಂವಿಧಾನವು ಎಲ್ಲರ ಏಳಿಗೆಗೆ ವಿಶೇಷ ಅವಕಾಶ ಕಲ್ಪಿಸಿದೆ. ಈ ಸಂವಿಧಾನದಡಿ ವಿಕಲಚೇತನರಿಗೆ ಸಾಕಷ್ಟು ಸೌಲಭ್ಯಗಳಿವೆ. ಈ ಪೈಕಿ ನಿಮಗೆ ತ್ರಿಚಕ್ರ ವಾಹನ ಸೌಲಭ್ಯ ನೀಡಲಾಗುತ್ತದೆ. ಈ ಸೌಲಭ್ಯದಿಂದ ವಿಕಲಚೇತನರಿಗೆ ಬಹಳಷ್ಟು ಅನುಕೂಲವಾಗುವುದು ಎಂದರು. ನಿಮ್ಮ ಪ್ರತಿ ಕೆಲಸ ಕಾರ್ಯಗಳಿಗೆ ಈ ವಾಹನ ನಿಮಗೆ ಆಧಾರವಾಗಲಿದೆ. ನಿಮ್ಮ ಸಶಕ್ತೀಕರಣಕ್ಕೆ ಕಾರಣವಾಗಲಿದೆ. ನೀವೂ ಬೇರೆ ಯಾರನ್ನೂ ಅವಲಂಬಿಸಿದೇ ಜೀವನದಲ್ಲಿ ಅಭಿವೃದ್ದಿ ಹೊಂದುವ ಮೂಲಕ ಸರ್ಕಾರದ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದರು.
ವಿಕಲಚೇತನರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ತ್ರಿ ಚಕ್ರವಾಹನ ನೀಡಲಾಗುತ್ತಿದೆ. ಜೊತೆಗೆ ನಿಮ್ಮ ಆತ್ಮವಿಶ್ವಾಸ ಇಮ್ಮಡಿಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಶಾಸಕರ ಅನುದಾನದಡಿ ನಿಯಮಾನುಸಾರ ಅರ್ಜಿ ಸಲ್ಲಿಸಿದವರಿಗೆ ವಿಕಲಚೇತನರಿಗೆ ವಾಹನ ನೀಡಲಾಗುತ್ತದೆ ಎಂದರು. ಈ ಯೋಜನೆಗಳ ಬಗ್ಗೆ ತಿಳಿದುಕೊಂಡು ಅವುಗಳ ಸದುಪಯೋಗಪಡಿಸಕೊಳ್ಳಬೇಕು ಎಂದರು.
ಚಡಚಣ ವಿಭಾಗದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರವಿದಾಸ ಜಾಧವ ಅವರು ಮಾತನಾಡಿ, ಈ ಕ್ಷೇತ್ರದ ವಿಕಲಚೇತನ 32 ಜನರಿಗೆ ತ್ರಿಚಕ್ರ ವಾಹನ ನೀಡಿದ್ದು, ವಿಶೇಷಚೇತನರಿಗಿರುವ ಸರ್ಕಾರದ ಸೌಲಭ್ಯ ಉಪಯೋಗಿಸಿಕೊಳ್ಳಿ ಎಂದರು.
ಮಾಸಾಶನ ಪಿಂಚಣಿ, ಬಸ್ ಪಾಸ್,ಉಚಿತ ಶಿಕ್ಷಣ, ಶೈಕ್ಷಣಿಕ ಉನ್ನತಿಗಾಗಿ ಸರ್ಕಾರ ಸೌಲಭ್ಯ ಒದಗಿಸಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ತನ್ಮೂಲಕ ವಿಕಲಚೇತನರು ಸಾಧನೆ ಮಾಡುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಸರಕಾರ ನೀಡಿರುವ ಈ ಸೌಲಭ್ಯವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸಮನಾಗಿ ಬಾಳುವ ಹಕ್ಕು ಇದೆ. ಅಂಗವಿಕಲತೆ ಕೊರತೆ ಅಲ್ಲ. ಅದೊಂದು ಸ್ಪೂರ್ತಿಯಾಗಿ ತಗೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ , ವಿಜಯಪುರದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಶೇಖರ್ ಅವಜಿ, ಪಾಲಿಕೆ ಸದಸ್ಯರಾದ ಶಫೀಕ ಮನಗೂಳಿ,
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಲಿಂ ಪೀರಜಾದೆ, ಸಂತೋಷ ಪಾಟೀಲ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 