ಗದಗ

ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ ಗುಣಮಟ್ಟದ ಉದ್ದಿನ ಕಾಳು ಖರೀದಿಗೆ ಬೆಂಬಲ ಬೆಲೆ ನಿಗದಿ

ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ಎಫ್‌.ಎ.ಕ್ಯೂ ಗುಣಮಟ್ಟದ  ಉದ್ದಿನ ಕಾಳು ಖರೀದಿಗೆ ಬೆಂಬಲ ಬೆಲೆ ನಿಗದಿ
Fixation of Minimum Support Price for the procurement of FAQ-quality black gram under the Minimum S

ಲೋಕದರ್ಶನ ವರದಿ 

             ಗದಗ  24 : 2026-27 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ ಗುಣಮಟ್ಟದ ಮುಂಗಾರು ಹಂಗಾಮಿನ ಉದ್ದಿನಕಾಳು  ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್  ತಿಳಿಸಿದರು. 

            ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ 2026-27 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೃಷಿ ಹುಟ್ಟುವಳಿಯಿಂದ ಉದ್ದಿನಕಾಳು ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್‌ಫೋರ್ಸ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

              ಜಿಲ್ಲೆಯಲ್ಲಿ ತೆರೆಯಲಾಗುವ ಉದ್ದಿನಕಾಳು   ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್‌. ಎ ಕ್ಯೂ ಗುಣಮಟ್ಟ ಪರೀಶೀಲನೆಗಾಗಿ  ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಎಫ್‌ಎಕ್ಯೂ ಗ್ರೇಡಿಂಗ್ ತರಬೇತಿ ನೀಡಬೇಕು. '

              ಸರ್ಕಾರದ ಆದೇಶಾನುಸಾರ ಪ್ರತಿ ಎಕರೆಗೆ 4 ಕ್ವಿಂಟಲ್‌ನಂತೆ  ಹಾಗೂ ಫ್ರುಟ್ಸ್‌ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಉದ್ದಿನಕಾಳು ಬೆಳೆದ ಜಮೀನಿನ ವಿಸ್ತೀರ್ಣಕ್ಕನುಗುಣವಾದ ಪ್ರಮಾಣದಲ್ಲಿ ಖರೀದಿಸಲು ಹಾಗೂ ಉದ್ದಿನಕಾಳು ಉತ್ಪನ್ನವನ್ನು ಖರೀದಿಸುವ ಪೂರ್ವದಲ್ಲಿ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಪೋರ್ಟಲ್ ನಲ್ಲಿ  ನ್ಯಾಪೆಡ್  ಮತ್ತು ಎನ್‌ಸಿ ಸಿಎಫ್ ಸಂಸ್ಥೆಗಳು ರಾಜ್ಯದ ರೈತರ ಮಾಹಿತಿಯನ್ನು ಫ್ರುಟ್ಸ್‌ ತಂತ್ರಾಂಶದೊಂದಿಗೆ ಸಂಯೋಜಿಸಿ ಭೂಮಿ ಬೆಳೆ ಸಮೀಕ್ಷೆ ಹಾಗೂ ಯುಐಡಿಎಐ ದತ್ತಾಂಶಗಳೊಂದಿಗೆ ಪರೀಶೀಲಿಸಿ ತಾಳೆ ಮಾಡಿ ಅಗತ್ಯ ಮಾಹಿತಿಯನ್ನು ನವೀಕರಿಸಿಕೊಂಡು.

              ಅರ್ಹ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು.   ಸರ್ಕಾರದ ಬೆಂಬಲ ಬೆಲೆಯಲ್ಲಿ ಉದ್ದಿನಕಾಳು  ಹುಟ್ಟುವಳಿಯ ಖರೀದಿ ಕುರಿತು ರೈತರು ಸದುಪಯೋಗಪಡೆದುಕೊಳ್ಳಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್  ಅವರು ನಿರ್ದೇಶನ ನೀಡಿದರು.    


ಸುದ್ದಿ ಓದಿ