ಲಾಕ್‌ಡೌನ್ ಸಮಯದಲ್ಲಿ ಫಿಕ್ಸಿಂಗ್ ಭೂತ!
ಲಂಡನ್, ಏ 19ಕೊರೊನಾ ವೈರಸ್ ನಿಯಂತ್ರಿಸುವ ಉದ್ಧೇಶದಿಂದ ವಿಶ್ವದೆಲ್ಲೆಡೆ ಹಲವು ರಾಷ್ಟ್ರಗಳು ಲಾಕ್‌ಡೌನ್ ಹೇರಿವೆ. ಇದರಿಂದಾಗಿ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಕ್ರಿಕೆಟ್ ಜಗತ್ತು ಕೂಡ ಸ್ತಬ್ಧವಾಗಿದೆ.ಲಾಕ್‌ಡೌನ್ ದಿನಗಳಲ್ಲಿ ಬಹುತೇಕ ಕ್ರಿಕೆಟರ್ಸ್ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು, ವಿವಿಧ ರೀತಿಯ ಜಾಗ್ರತಾ ವಿಡಿಯೋಗಳನ್ನು ಹಂಚಿಕೊಳ್ಳುವುದರ ಜೊತೆಗೆ ಅಭಿಮಾನಿಗಳೊಟ್ಟಿಗೆ ಚರ್ಚೆಯಲ್ಲಿ ತೊಡಗಿಸಿಕೊಂಡು ಕಾಲ ಕಳೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಕ್ರಿಕೆಟ್ ಲೋಕದ ಕರಾಳ ಮುಖವೊಂದು ಎಚ್ಚರಗೊಂಡಿದ್ದು, ಮ್ಯಾಚ್ ಫಿಕ್ಸಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್‌ನಂತಹ ಮೋಸದಾಟಗಳಲ್ಲಿ ಪಾಲ್ಗೊಳ್ಳುವಂತೆ ಮಾಡಲು ಆಟಗಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಕೆಲ ಬುಕ್ಕೀಗಳು ಕ್ರಿಕೆಟಿಗರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿರುವ ಅಚ್ಚರಿಯ ಸಂಗತಿಯನ್ನು ಐಸಿಸಿ ಭ್ರಷ್ಟಾಚಾರ ತಡೆ ಘಟಕದ ಮುಖ್ಯಸ್ಥ ಅಲೆಕ್ಸ್ ಮಾರ್ಷಲ್ ಬಾಯ್ಬಿಟ್ಟಿದ್ದಾರೆ.ಸಾಮಾಜಿಕ ಮಾಧ್ಯಮಗಳ ಮೂಲಕ ಕ್ರಿಕೆಟಿಗರ ಸಂಪರ್ಕಕ್ಕೆ ಬಂದು ಅವರ ಸ್ನೇಹ ಸಂಪಾದಿಸಿ ಬಳಿಕ ತಮಗೆ ಅಗತ್ಯದ ಸಮಯದಲ್ಲಿ ಅದರ ದುರುಪಯೋಗ ಪಡಿಸಿಕೊಳ್ಳುವ ಎಲ್ಲಾ ರೀತಿಯ ಹುನ್ನಾರ ಚಾಲ್ತಿಯಲ್ಲಿದೆ ಎಂದು ಮಾರ್ಷಲ್ ಎಚ್ಚರಿಸಿದ್ದಾರೆ. "ಈ ಬಗ್ಗೆ ಈಗಾಗಲೇ ಎಲ್ಲಾ ಸದಸ್ಯತ್ವ ಕ್ರಿಕೆಟ್ ಮಂಡಳಿಗಳಿಗೆ, ಆಟಗಾರರಿಗೆ ಮತ್ತು ಅವರ ಸಿಬ್ಬಂದಿ ಬಳಗವನ್ನು ಸಂಪರ್ಕಿಸಿ ಎಚ್ಚರಿಕೆ ನೀಡಲಾಗಿದ್ದು. ಇಂತಹ ಅಪಾಯಕಾರಿ ಆಹ್ವಾನಗಳಿಂದ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನಮ್ಮ ಆಟಗಾರರು ಪರಿಸ್ಥಿತಿ ಅರ್ಥಮಾಡಿಕೊಂಡು ಸರಿಯಾದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ," ಎಂದು ಮಾರ್ಷಲ್ ವಿವರಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 