ದುರ್ಗಾದೇವಿ ಮೆರವಣಿಗೆಗೆ ಚಾಲನೆ
Flag-off of the Durga Devi procession
ಲಕ್ಷ್ಮೇಶ್ವರ, ಸೆ. 8: ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಪ್ರತಿವರ್ಷ ಶ್ರಾವಣ ಮಾಸದಲ್ಲಿ ನಡೆಯುವ ಶ್ರೀ ದುರ್ಗಾದೇವಿ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ದುರ್ಗಾದೇವಿ ಭಾವಚಿತ್ರದ ಮೆರವಣಿಗೆ ನಡೆಯಿತು.
ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಹಾಗೂ ಭೋವಿ ವಡ್ಡರ ಸಮಾಜದ ಮುಖಂಡ, ಶಿರಹಟ್ಟಿ ಮತಕ್ಷೇತ್ರದ ಸೇವಾಕಾಂಕ್ಷಿ ಬಿ.ಟಿ. ಚಂದ್ರಶೇಖರ ಅವರು ಟ್ರ್ಯಕ್ಟರ್ ಚಾಲನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರಾವಣ ಮಾಸವು ಹಿಂದೂಗಳ ಪಾಲಿಗೆ ಅತ್ಯಂತ ಪವಿತ್ರವಾಗಿದ್ದು, ಈ ಮಾಸದಲ್ಲಿ ಭಕ್ತರು ಕಟ್ಟು ನಿಟ್ಟಿನ ವ್ರತಾಚರಣೆ ನಡೆಸಿ, ಮಾಂಸಾಹಾರ ಸೇವಿಸದೆ ಪ್ರತಿದಿನ ಪೂಜೆ, ಪುನಸ್ಕಾರಗಳನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸುತ್ತಾರೆ. ಅದರಂತೆ ಭೋವಿ ಸಮಾಜದವರು ಕೂಡ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವಿಸದೆ, ದುರ್ಗಾದೇವಿಯನ್ನು ಸ್ಮರಿಸುತ್ತಾ ಭಕ್ತಿಯಿಂದ ಮಾಸಾಚರಣೆ ಮಾಡುತ್ತಿದ್ದಾರೆ ಎಂದರು.
ಮೆರವಣಿಗೆಯಲ್ಲಿ ಮಹಿಳೆಯರು ಭಜನೆ ಮಾಡುತ್ತಾ ಆರತಿ ಬೆಳಗಿದರು. ಸಮಾಜದ ಮುಖಂಡರು, ಹಿರಿಯರು, ಮಹಿಳೆಯರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ, ಶ್ರಾವಣ ಮಾಸದ ಕೊನೆಯ ಮಂಗಳವಾರದ ಅಂಗವಾಗಿ ಮಹಾಪ್ರಸಾದ ವಿತರಣೆಯೊಂದಿಗೆ ಮುಕ್ತಾಯಗೊಂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 