ಗುಳೇಗುಡ್ಡ

ಪ್ರವಾಹ ಪರಿಸ್ಥಿತಿ ಸಾಧ್ಯತೆ : ರೈತರಿಗೆ ಸಿದ್ದರಾಮಯ್ಯ ಮನವಿ

ಪ್ರವಾಹ ಪರಿಸ್ಥಿತಿ ಸಾಧ್ಯತೆ : ರೈತರಿಗೆ ಸಿದ್ದರಾಮಯ್ಯ ಮನವಿ

ಗುಳೇದಗುಡ್ಡ 23: ನವಿಲುತೀರ್ಥ ಆಣೆಕಟ್ಟೆಯಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಣದಲ್ಲಿ ನೀರು ಬಿಡುಗಡೆ ಮಾಡುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಕಾರಣ ನದಿ ದಡದ ಗ್ರಾಮಗಳ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ತಾಣದಲ್ಲಿರಬೇಕೆಂದು ಬಾದಾಮಿ ಕ್ಷೇತ್ರದ ಶಾಸಕರೂ, ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರು ರೈತರಿಗೆ ಮನವಿ ಮಾಡಿಕೊಂಡಿದ್ದಾರೆ. 

ಶುಕ್ರವಾರ ಸ್ಥಳೀಯ ಮಾಧ್ಯಮಕ್ಕೆ ಪ್ರಕಟಣೆ ನೀಡಿ, ನವೀಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಯ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರೊಂದಿಗೆ ದೂರವಾಣಿ ಮೂಲಕ ಕೇಳಿಕೊಳ್ಳಲಾಗಿದೆ. ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದರಿಂದ ಬಾದಾಮಿ ಕ್ಷೇತ್ರದ ಕೆರೆಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಿ ಜಾನುವಾರುಗಳಿಗೂ ಅನುಕೂಲವಾಗುತ್ತದೆ. ಆದರೆ ನವಿಲುತೀರ್ಥ ಆಣೆಕಟ್ಟೆಯಿಂದ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಣದಲ್ಲಿ ನೀರು ಬಿಡುಗಡೆ ಮಾಡುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಕಾರಣ ಎಚ್ಚರಿಕೆ ವಹಿಸಬೇಕೆಂದು  ಮಾಜಿ ಸಿ.ಎಂ. ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 


ಸುದ್ದಿ ಓದಿ