ಮಹಾರಾಷ್ಟ್ರದ ವಿವಿಧೆಡೆ ಪ್ರವಾಹ ಭೀತಿ : ಪ್ರಧಾನಿ–ಉದ್ಧವ್ ಚರ್ಚೆ
ಮುಂಬೈ, ಜುಲೈ 23 ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿನ ಪ್ರಸ್ತುತ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಚರ್ಚಿಸಿದ್ದಾರೆ.
ರಾಜ್ಯ ಸರ್ಕಾರವು ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ಮತ್ತು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಉದ್ಧವ್ ಠಾಕ್ರೆ ಪ್ರಧಾನಿಯವರಿಗೆ ಮಾಹಿತಿ ನೀಡಿದ್ದಾರೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ರಾಜ್ಯಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತದೆ ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ.
ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗಲಿರುವ ರಾಜ್ಯದ ಹಲವಾರು ಪ್ರದೇಶಗಳಿಗೆ ಭಾರತ ಹವಾಮಾನ ಇಲಾಖೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಿದೆ. ಮುಂಬೈ, ಥಾಣೆ, ರಾಯಗಡ, ಪಾಲ್ಘರ್, ರತ್ನಗಿರಿ ಮತ್ತು ಸಿಂಧುದುರ್ಗ್ ಜೊತೆಗೆ ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.