ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
ಮೈಸೂರು, ಜ 18,ಪ್ರವಾಸಿಗರಿಗಾಗಿ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈಬಸ್ ಸೇವೆಯನ್ನು ಆರಂಭಿಸಲು ಸಂಬಂಧಿತ ಇಲಾಖೆಗಳು ಉದ್ದೇಶಿಸಿವೆ. ಸಾರ್ವಜನಿಕರಿಂದ ಸಲಹೆಗಳು ಮತ್ತು ಸಮಗ್ರ ಸಮೀಕ್ಷೆಯನ್ನು ಈ ಯೋಜನೆ ಆಧರಿಸಿದೆ. ಸೇವೆಯನ್ನು ಆರಂಭಿಸಲು ಕೆಎಸ್ ಆರ್ ಟಿಸಿಯೊಂದಿಗೆ ಮಾತುಕತೆ ನಡೆದಿದೆ ಎಂದು ಮೈಸೂರು ವಿಮಾನ ನಿಲ್ದಾಣ ನಿರ್ದೇಶಕ ಆರ್.ಮಂಜುನಾಥ್ ತಿಳಿಸಿದ್ದಾರೆ. ಈ ಸಂಬಂಧ ಕೆಎಸ್‍ಆರ್ ಟಿಸಿ ಅಧಿಕಾರಿಗಳೊಂದಿಗೆ ಮುಂದಿನ ವಾರ ಸಭೆ ನಿಗದಿಯಾಗಿದೆ. ಆ ನಂತರ ಫ್ಲೈ ಬಸ್ ಸೇವೆಯನ್ನು ನಗರದ ವಿಮಾನನಿಲ್ದಾಣದಿಂದ ಆರಂಭಿಸಲಾಗುವುದು. ಈ ಸೇವೆಯು ಮೈಸೂರಿಗೆ ಬರುವ ಪ್ರವಾಸಿಗರಿಗೆ ಪ್ರಯೋಜನವಾಗಲಿದ್ದು, ಊಟಿ ಇಲ್ಲವೇ ಮಡಿಕೇರಿಗೆ ನೇರವಾಗಿ ತೆರಳಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ವಿಮಾನ ಪ್ರಯಾಣಿಕರ ಅನುಕೂಲಕ್ಕಾಗಿ ಮಂಡಕಳ್ಳಿ ವಿಮಾನನಿಲ್ದಾಣದಿಂದ ನಗರಕ್ಕೆ ಬಸ್ ಸೇವೆ ಆರಂಭಿಸುವ ಯೋಜನೆಯೂ ಇದೆ. ಸದ್ಯ, ವಿಮಾನ ನಿಲ್ದಾಣದಲ್ಲಿ ಪ್ರತಿದಿನ 16 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ(ಕೆಎಸ್‍ಐಎಸ್‍ಎಫ್)ಯನ್ನು ನಿಯೋಜಿಸಲಾಗುತ್ತಿದೆ. ಮೈಸೂರಿನಲ್ಲಿ ಇತ್ತೀಚೆಗೆ ಈ ಕುರಿತಂತೆ ಹೆಚ್ಚುವರಿ ಡಿಜಿಪಿ(ಆಂತರಿಕ ಭದ್ರತೆ) ಪ್ರತಾಪ್ ರೆಡ್ಡಿಯವರು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 