ಜಾನಪದ ಉತ್ಸವ
ಲೋಕದರ್ಶನ ವರದಿ
ಶಿಗ್ಗಾವಿ : ತಾಲೂಕಿನ ಹಿರೇಮಣಕಟ್ಟಿ ಗ್ರಾಮದಲ್ಲಿ ವೀರಭದ್ರೇಶ್ವರ ಯುವಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾವೇರಿ, ಇವರ ಸಂಯುಕ್ತ ಆಶ್ರಯದಲ್ಲಿ ಮಕರ ಸಂಕ್ರಾತಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಜೋಡಿ ಬಸವೇಶ್ವರ ಜಾನಪದ ಕಲಾತಂಡ ಚಿಕ್ಕಮಣಕಟ್ಟಿ ಇವರಿಂದ ಜಾನಪದ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅದ್ಯಕ್ಷರು ಸರ್ವ ಸದಸ್ಯರು ಹಾಗೂ ಎಸ್ಡಿಎಂಸಿ ಅದ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.