ಗಾಂಧೀಜಿಯವರ ತತ್ವಾದರ್ಶಗಳನ್ನು ಪಾಲಿಸಿ: ತಹಶೀಲ್ದಾರ ಮಠದ
ಯರಗಟ್ಟಿ 02: ಮಹಾತ್ಮ ಗಾಂಧೀಜಿಯವರು ಅಹಿಂಸಾ ತತ್ವದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ಚೇತನ. ಅದಕ್ಕಾಗಿಯೇ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ.
ರಕ್ತಕ್ರಾಂತಿಯಾಗದೆ ಯಾವುದೇ ದೇಶಕ್ಕೆ ಸ್ವಾತಂತ್ರ್ಯ ದೊರೆತ ಉದಾಹರಣೆಗಳಿಲ್ಲ. ಆದರೆ ಅಹಿಂಸೆ ಮುಖಾಂತರವೂ ಶತ್ರುಗಳನ್ನು ಸೋಲಿಸಬಹುದು ಎನ್ನುವುದನ್ನು ಗಾಂಧೀಜಿ ತೋರಿಸಿಕೊಟ್ಟಿದ್ದಾರೆ. ನಾವೆಲ್ಲರೂ ಅವರ ಆದರ್ಶ, ತತ್ವಗಳನ್ನು ಪಾಲಿಸಬೇಕು ಎಂದು ತಹಶೀಲ್ದಾರ ಮಹಾಂತೇಶ ಮಠದ ಅವರು ತಿಳಿಸಿದರು.
ಯರಗಟ್ಟಿ ತಾಲೂಕಾ ಆಡಳಿತದಿಂದ ತಹಶೀಲ್ದಾರ ಕಚೇರಿಯಲ್ಲಿ ಏರಿ್ಡಸಲಾದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾತ್ಮ?ಗಾಂಧೀಜಿಯವರ ಆದರ್ಶ ಮೌಲ್ಯಗಳನ್ನು ಎಲ್ಲರೂ ಜೀವನದಲ್ಲಿ ಪಾಲಿಸುವಂತಾಗಬೇಕು. ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಕೂಡ ಮಹಾನ್ ದೇಶ ಭಕ್ತರು. ದೇಶ ಸೇವೆಗೆ ತಮ್ಮ ಜೀವನ ಮುಡುಪಾಗಿಟ್ಟಿದ್ದರು ಎಂದು ಹೇಳಿದರು.
ಇದಕ್ಕೂ ಮುಂಚೆ ಮಹತ್ಮಾ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ದೀಪ ಬೆಳಗುವುದರ ಮೂಲಕ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಗ್ರೇಡ್ 2 ತಹಶೀಲ್ದಾರ ಎಸ್. ಜಿ. ದೊಡ್ಡಮನಿ ಇದ್ದರು.