ಸಾವಿತ್ರಿಬಾಯಿ ಫುಲೆ ಆದರ್ಶ ಅನುಸರಿಸಿ
Following the ideals of Savitribai Phule
ಹೂವಿನಹಡಗಲಿ, ಸೆ. 5: ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ ಹೇಳಿದರು.
ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಶನಿವಾರ ಡಾ. ರಾಧಾಕೃಷ್ಣನ್ ಸ್ಮರಣಾರ್ಥ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬೋಧನಾ ಕ್ಷೇತ್ರದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಹೇಳಿದರು.
ಶಿಕ್ಷಕಿ ವೈ. ಜಯಮ್ಮ ಮಾತನಾಡಿ, ಡಾ. ರಾಧಾಕೃಷ್ಣನ್ ಅವರು ಕಡು ಬಡತನದಲ್ಲಿಯೂ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದ ಮಹಾನ್ ವ್ಯಕ್ತಿ. ಅವರ ಆದರ್ಶ, ಆಚಾರ-ವಿಚಾರಗಳನ್ನು ಅರ್ಥೈಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಮನರಂಜನಾ ಕ್ರೀಡೆ ಹಾಗೂ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಶಿಕ್ಷಕರು ಎಲ್ಲ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಸ್. ದ್ವಾರಕೀಶ್ ರೆಡ್ಡಿ, ಸ್ವಾಮಿನಾಥ, ರಾಮಸ್ವಾಮಿ, ಬಸಪ್ಪ, ಕೆ. ಆನಂದ್, ಜಿ. ಲಂಬಾಣಿ, ಗೀತಾ, ಪ್ರತಿಮಾ, ಎನ್. ರೇಖಾ, ಎಸ್. ಸಂತೋಷ್ ಕುಮಾರ್, ಎಸ್.ಹೆಚ್.ಎಸ್. ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎಲ್ಲ ಶಿಕ್ಷಕರಿಗೆ ಡಾ. ರಾಧಾಕೃಷ್ಣನ್ ಅವರ ಪುಸ್ತಕ ಹಾಗೂ ಲೇಖನಿಯನ್ನು ವಿದ್ಯಾರ್ಥಿಗಳು ಉಡುಗೊರೆಯಾಗಿ ನೀಡಿದರು. ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ, ಇಂದಿರಾ, ಜೆ.ಎನ್. ಸಂಜನಾ, ಹರ್ಷಿತಾ, ಗುಡಿಹಳ್ಳಿ ಕೆ. ನಾಗವೇಣಿ, ಬಿ. ಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 