ಅಧ್ಯಾತ್ಮದ ಮಾರ್ಗ ಅನುಸರಿಸುವುದು ಅತ್ಯಗತ್ಯ: ಪ್ರಭಯ್ಯಶಾಸ್ತ್ರೀ ಹಿರೇಮಠ
ಶಿಗ್ಗಾವಿ 14: ಮನುಷ್ಯ ಜೀವನದಲ್ಲಿ ನೆಮ್ಮದಿ, ಮಾನವೀಯ ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಲು ಅಧ್ಯಾತ್ಮದ ಮಾರ್ಗ ಅನುಸರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಗಳು ವ್ಯಕ್ತಿಯಲ್ಲಿ ಸದ್ಗುಣಗಳನ್ನು ಬೆಳೆಸುವುದರ ಜತೆಗೆ ಸಮಾಜದಲ್ಲಿ ಸಾಮರಸ್ಯ ಮತ್ತು ಶಾಂತಿ ನೆಲೆಸಲು ಸಹಕಾರಿಯಾಗುತ್ತವೆ ಎಂದು ಪಂ ಪುಟ್ಟರಾಜ ಕವಿ ಗವಾಯಿಗಳ ಶಿಷ್ಯ ಪ್ರಭಯ್ಯಶಾಸ್ತ್ರೀ ಹಿರೇಮಠ ಹೇಳಿದರು. ಪಟ್ಟಣದ ಗ್ರಾಮದೇವಿ ಜಾತ್ರಾ ಮಹೋತ್ಸವ ಸಮಿತಿ ವತಿಯಿಂದ ಶರನ್ನವರಾತ್ರಿ ಕಾರ್ಯಕ್ರಮ ಅಂಗವಾಗಿ 3 ನೇ ದಿನದ ದೇವಿ ಪುರಾಣ ಪ್ರವಚನ ಉದ್ದೇಶಿಸಿ ಮಾತನಾಡಿದ ಅವರು ದೇವಿ ಪುರಾಣ ದೇಹದ ಪುರಾಣ, ಶಿಗ್ಗಾವಿ ಕ್ಷೇತ್ರವು ತನ್ನದೇ ಆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಪ್ರತಿಯೊಬ್ಬರೂ ಸ್ವಪ್ರಯತ್ನದಿಂದ ಬದುಕಿನಲ್ಲಿ ಸಾಧನೆ ಮಾಡಬೇಕು. ದೇವಸ್ಥಾನ ಮಠಮಂದಿರಗಳಲ್ಲಿ ನಡೆಯುವ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಧಾರ್ಮಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಹಿರಿಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಸಂಗೀತ ಸೇವೆಯನ್ನು ಶಿವಾನಂದ ವಂದೇವಾಲ, ತಬಲಾ ಸೇವೆ ಬಸವರಾಜ ಚಳಗೇರಿ ಸಂಗೀತ ಸೇವೆಯನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಸೇರಿದಂತೆ ಸದ್ಬಕ್ತರು ಉಪಸ್ಥಿತರಿದ್ದರು.