ಕಾರವಾರದಲ್ಲಿ ಸೆ.6ಕ್ಕೆ ಫುಟ್ಬಾಲ್ ಟ್ರಯಲ್ಸ್
Football trials in Karwar on September 6
ಕಾರವಾರ ಆ.22: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ (ಕೆಎಸ್‌ಎಫ್‌ಎ) ಹಾಗೂ ಬೋಲ್ಡ್ ಆ್ಯಂಡ್ ಡೈನಾಮಿಕ್ ಸ್ಪೋರ್ಟ್ಸ ಕ್ಲಬ್ ಸಹಯೋಗದಲ್ಲಿ ಮೊದಲ ಬಾರಿಗೆ ‘ಟೈಗರ್ ಎಫ್ಕೆ ನಮ್ಮ ಕರ್ನಾಟಕ ಫುಟ್ಬಾಲ್ ಟ್ರಯಲ್ಸ್’ ಆಯೋಜಿಸಲಾಗಿದೆ ಎಂದು ಕ್ಲಬ್ ಉಪಾಧ್ಯಕ್ಷ ಲಿಯೋ ಲೆವಿಸ್ ತಿಳಿಸಿದರು.
ಕಾರವಾರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಯಲ್ಸ್ ಮೂಲಕ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯುವ ಫುಟ್ಬಾಲ್ ಆಟಗಾರರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ಅವಕಾಶ ದೊರೆಯಲಿದೆ ಎಂದರು.
ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ತರಬೇತಿ ನೀಡುವ ಮೂಲಕ ಇಂಡಿಯನ್ ಲೀಗ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶ ಹೊಂದಲಾಗಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ಆಟಗಾರರಿಗೂ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.
ಇಂಡಿಯಾ ಖೇಲೋ ಫುಟ್ಬಾಲ್ ಸ್ಕೌಟಿಂಗ್ ಮತ್ತು ಆಪರೇಷನ್ಸ್ ಎಕ್ಸಿಕ್ಯೂಟಿವ್ ಯಧುಕೃಷ್ಣನ್ ವಿ. ಮಾತನಾಡಿ, ಸ್ಥಳೀಯ ಆಟಗಾರರಿಗೆ ವೃತ್ತಿಪರ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಸ್ಕೌಟಿಂಗ್ ಮತ್ತು ಟ್ರಯಲ್ಸ್ ನಡೆಸಲಾಗುತ್ತಿದೆ ಎಂದರು. ಹಲವು ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ಗಳು ಹಾಗೂ ಅಕಾಡೆಮಿಗಳು ಕಾರ್ಯಕ್ರಮದೊಂದಿಗೆ ಕೈಜೋಡಿಸಿವೆ ಎಂದು ತಿಳಿಸಿದರು.
ಸೆ.6ರಂದು ಟ್ರಯಲ್ಸ್: ಕಾರವಾರದ ಮಾಲಾದೇವಿ ಮೈದಾನದಲ್ಲಿ ಸೆಪ್ಟೆಂಬರ್ 6ರಂದು ಟ್ರಯಲ್ಸ್ ನಡೆಯಲಿದೆ. ಕಾರವಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ 2009ರಿಂದ 2016ರ ಅವಧಿಯಲ್ಲಿ ಜನಿಸಿದ ಬಾಲಕ-ಬಾಲಕಿಯರು ಭಾಗವಹಿಸಬಹುದು.
ಸುದ್ದಿಗೋಷ್ಠಿಯಲ್ಲಿ ಕ್ಲಬ್ ಅಧ್ಯಕ್ಷ ಪಿ.ವಿ. ಪ್ರಜಿತ್, ಉಪಾಧ್ಯಕ್ಷ ಆಂಟನಿ ಡಿಕೋಸ್ಟಾ, ಸಂಯೋಜಕ ಸ್ಯಾಮ್ಸನ್ ಜಾನ್ ಡಿಸೋಜಾ, ಕಾರ್ಯದರ್ಶಿ ಅಕ್ವಿಲ್ ಫರ್ನಾಂಡಿಸ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 