ಶಿರಹಟ್ಟಿ

ರಾಜ್ಯ ಮಟ್ಟದ ರಾಷ್ಟ್ರೀಯ ಮತದಾರ ದಿನಾಚರಣೆ ಸ್ಪಧರ್ೆಗೆ : ಶ್ವೇತಾ ನವಲಗುಂದ ಆಯ್ಕೆ

ರಾಜ್ಯ ಮಟ್ಟದ ರಾಷ್ಟ್ರೀಯ ಮತದಾರ ದಿನಾಚರಣೆ ಸ್ಪಧರ್ೆಗೆ : ಶ್ವೇತಾ ನವಲಗುಂದ ಆಯ್ಕೆ

ಶಿರಹಟ್ಟಿ : ಪಟ್ಟಣದ ಫಕೀರಪ್ಪ ಭರಮಪ್ಪ ಪೂಜಾರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ನವಲಗುಂದ ಇವರು ಗದಗಿನ ಜಗದ್ಗುರು ತೋಂಟದಾರ್ಯ ಕಾಲೇಜಿನಲ್ಲಿ ಗದಗ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರ ದಿನಾಚರಣೆ ಸ್ಪರ್ಧೆಯಲ್ಲಿ ಭಾಗವಹಿಸಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ  ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವರು ಎಂದು ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣವರ ಅವರು ತಿಳಿಸಿದ್ದಾರೆ. 

ವಿಜೇತ ವಿದ್ಯಾರ್ಥಿನಿ ರಾಜ್ಯ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಲಿ ಎಂದು ಶಾಸಕ ಡಾ.ಚಂದ್ರು ಲಮಾಣಿ, ಕಾಲೇಜು ಆಭಿವೃದ್ಧಿ ಸಮಿತಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ರಾಜ್ಯ ಮಟ್ಟದ ರಾಷ್ಟ್ರೀಯ ಮತದಾರ ದಿನಾಚರಣೆ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿನಿ ಶ್ವೇತಾ ನವಲಗುಂದ ಅವರಿಗೆ ಶುಭ ಹಾರೈಸಿದ್ದಾರೆ.

ಸುದ್ದಿ ಓದಿ