ಶಿಕ್ಷಣ ಜ್ಞಾನಕ್ಕಾಗಿಯೇ ಹೊರತು ವ್ಯಕ್ತಿ ಆರಾಧನೆಗಾಗಿ ಅಲ್ಲ: ಡಾ.ಸಿ.ಎನ್ ಅಶ್ವತ್ಥನಾರಾಯಣ
ಬೆಂಗಳೂರು, ಡಿ.28 ದೇಶದಲ್ಲಿ ನಡೆಯುವ ಎಲ್ಲಾ ಸಂಶೋಧನೆಗಳು ತಿಳುವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿರಬೇಕೇ ಹೊರತು ಮೆಚ್ಚುಗೆಯ ಸಂಶೋಧನೆಯಾಗಬಾರದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಪ್ರತಿಷ್ಠಿತ ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್‌ಸ್ಟಿಟ್ಯೂಟ್ ನ ವಜ್ರಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, "ಶಿಕ್ಷಣ ಜ್ಞಾನಕ್ಕಾಗಿ ಇರಬೇಕೇ ಹೊರತು ವ್ಯಕ್ತಿ ಆರಾಧನೆಗಾಗಿ ಅಲ್ಲ. ಜ್ಞಾನಾರ್ಜನೆ ನಿರಂತರ ಪ್ರಕ್ರಿಯೆಯಾಗಿದ್ದು, ಸರಳ ಶಿಕ್ಷಣಕ್ಕೆ ನಾವೆಲ್ಲರೂ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು. ವಿಶ್ವದಾದ್ಯಂತ ನಡೆಯುವ ಸಂಶೋಧನೆಗಳು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇರಬೇಕು. ಯಾರನ್ನೋ ಮೆಚ್ಚಿಸುವ ರೀತಿಯಲ್ಲಿ ಇರಬಾರದು. ತಿಳುವಳಿಕೆ ಹೆಚ್ಚಿಸುವ ಸಂಶೋಧನೆಗಳಿಗೆ ಶಿಕ್ಷಣ ಸಂಸ್ಥೆಗಳು ಸಹಾಯ ಮಾಡಬೇಕು. "ಶಿಕ್ಷಣ ಕೇವಲ ಪದವಿಗೆ ಸೀಮಿತವಾಗಿರದೆ ಜ್ಞಾನಾರ್ಜನೆಗೆ ಆಧ್ಯತೆಯಾಗಬೇಕು. ಕಮ್ಯುನಿಟಿ ಸೆಂಟರ್ ಜ್ಞಾನಾರ್ಜನೆಯ ದಾರಿಯಲ್ಲಿ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬರ ಬದುಕು ರೂಪಿಸಲು ಶಿಕ್ಷಣ ನೆರವಾಗಲಿ. ಪ್ರತಿಯೊಬ್ಬರ ಭಾವನೆಗಳಿಗೆ ಪೂರಕವಾದ ಶಿಕ್ಷಣ ಲಭ್ಯವಾಗುವಂತೆ ಮಾಡೋಣ. ಸರ್ಕಾರದ ವತಿಯಿಂದ ನಾವು ನಮ್ಮ ಪ್ರಯತ್ನ ನಾವು ಮಾಡ್ತೇವೆ. ಇದಕ್ಕೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಸಹಕಾರ ಬೇಕು ಎಂದು ಅವರು ಹೇಳಿದರು. ಶಾಂತಿ, ನೆಮ್ಮದಿ ಹಾಗೂ ಸಮಾಧಾನ ಕಲಿಸುವ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕಮ್ಯುನಿಟಿ ಸೆಂಟರ್ ಆಫ್ ಎಜುಕೇಷನ್ ಇನ್‌ಸ್ಟಿಟ್ಯೂಟ್ ಗೆ ಅಭಿನಂದನೆ ಸಲ್ಲಿಸುತ್ತೇನೆ," ಎಂದು ಡಾ ಅಶ್ವತ್ಥನಾರಾಯಣ ಹೇಳಿದರು. ಸಮಾರಂಭದಲ್ಲಿ ಶಾಸಕ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸಂಸ್ಥೆಯ ಅಧ್ಯಕ್ಷ ಕೆ.ಎಂ.ನಾಗರಾಜ್ ಹಾಗೂ ಆಡಳಿತ ಮಂಡಳಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 