ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ

For the extremely poor who are deprived of basic amenities

ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ  

ಹಾವೇರಿ 13 : ಜಿಲ್ಲೆಯಲ್ಲಿ ಹಟ್ಟಿ, ತಾಂಡಾ ನಿವಾಸಿಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ತಾಂಡಾಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದು, ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಉಳಿದುಕೊಂಡಿರುವ ಕಂದಾಯ ಗ್ರಾಮಗಳ ರಚನೆಗೆ ಅಂತಿಮ ಅಧಿಸೂಚನೆ ಸಲ್ಲಿಸಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಹೇಳಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುದುವಾರ ಆಯೋಜಿಸಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದ್ದರು ಈ ವರೆಗೂ ಪೂರ್ಣಗೊಂಡಿಲ್ಲ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಈಗ ಸರ್ಕಾರ ಮುಂದಾಗಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಗುಂಪುಗಳು ವಾಸಿಸುತ್ತಿವೆ, ಅವುಗಳನ್ನು ಕಾನೂನುಬದ್ಧಗೊಳಿಸಿ ಆ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಮಹತ್ತರ ಉದ್ದೇಶವನ್ನು ಹೊಂದಿದೆ. ಹಟ್ಟಿ, ತಾಂಡಾ, ಕಾಲನಿಗಳನ್ನು ಸೇರಿ ರಾಜ್ಯಾದಲ್ಲಿ ಸುಮಾರು 3 ಸಾವಿರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಲು ಭೂಕಂದಾಯ ಕಾಯ್ದೆಗೆ 2017 ರಲ್ಲಿ ತಿದ್ದುಪಡಿ ಮಾಡಲಾಗಿದೆ. ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಸಮುದಾಯಗಳಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ಕಾನೂನಿಗೆ ತಿದ್ದುಪಡಿ ತರಲಾಗಿದೆ ಆದರೂ ಅದರ ಅನುಷ್ಠಾನ ಈ ವರೆಗೂ ಪೂರ್ಣಗೊಂಡಿರುವುದಿಲ್ಲ ಎಂದರು.  

*ಭೂ ಸುರಕ್ಷಾ ಯೋಜನೆಗೆ ವೇಗ ನೀಡಿ* ಭೂ ಸುರಕ್ಷಾ ಯೋಜನೆಯನ್ನು ಭೂ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶವನ್ನು ಹೊಂದಿದೆ ಈ ಯೋಜನೆಯು ತ್ವರಿತಗತಿಯಲ್ಲಿ ಸಾಗಬೇಕು ಜಿಲ್ಲೆಯಲ್ಲಿ ಸರಾಸರಿ 10 ಸಾವಿರ ಪುಟಗಳ ಸ್ಕ್ಯಾನ್ ಹಾಗೂ ಅಪ್‌ಲೋಡ್ ಆಗಬೇಕು ಇದರಿಂದ ಸಾರ್ವಜನಿಕರಿಗೆ ಆನ್ಲೈನ್ ನಲ್ಲಿಯೇ ಅವಶ್ಯಕ ವಿರುವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಇದರಿಂದ ಸಾರ್ವಜನಿಕರು ವಿನಾಕಾರಣ ಕಚೇರಿಗೆ ಅಲೆದಾಡುವುದು ತಪ್ಪಲಿದೆ ಹಾಗೂ ದಲ್ಲಾಳಿಗಳ ಹಾವಳಿಯು ತಪ್ಪಲಿದೆ ಜನರ ದಾಖಲೆಗಳು ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಸುಮಾರು 52 ಲಕ್ಷಕ್ಕೂ ಹೆಚ್ಚು ಕೃಷಿ ಭೂಮಿಯ ಪ್ರಕರಣಗಳು ಇನ್ನೂ ಮೃತ ವ್ಯಕ್ತಿಗಳ ಹೆಸರಿನಲ್ಲಿವೆ ಪಿತ್ರಾರ್ಜಿತ ದಾಖಲೆಗಳನ್ನು ನವೀಕರಿಸುವ ಕಾರ್ಯಕ್ಕೆ ವೇಗಹೆಚ್ಚಿಸುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ ಎಂದರು. 

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್ ಎಫ್ ಎಲ್ ಗಾಜಿಗೌಡರ, ಹಾನಗಲ್ ಶಾಸಕರಾದ ಶ್ರೀನಿವಾಸ ಮಾನೆ, ಹಿರೇಕೆರೂರ ಶಾಸಕರಾದ ಯು ಬಿ ಬಣಕಾರ, ಶಿಗ್ಗಾಂವ ಶಾಸಕರಾದ ಯಾಸೀರಅಹ್ಮದಖಾನ್ ಪಠಾಣ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ, ಅಪರ   ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಎಲ್ಲ ತಾಲೂಕಿನ ಎಸಿ, ತಹಸೀಲ್ದಾರರು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.