ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಭಾಗಿ
ಶಿಗ್ಗಾವಿ 28: ತಾಲೂಕಿನ ಬಂಕಾಪೂರ ಪಟ್ಟಣದಲ್ಲಿ ಪ್ರತಿಷ್ಟಾಪಿಸಿದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯ ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದ ಬಸವರಾಜ ಬೊಮ್ಮಾಯಿರವರು ಭಾಗವಹಿಸಿ, ವಿಘ್ನವಿನಾಶಕನ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ನರಹರಿ ಕಟ್ಟಿ, ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಬಸವರಾಜ ನಾರಾಯಣಪೂರ, ಹಿಂದೂ ಮಹಾಸಭಾ ಗಣಪತಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು, ಯುವಕರು ಉಪಸ್ಥಿತರಿದ್ದರು.