ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಟೋಕಿಯೋ:ಜುಲೈ 08 : ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ನಾರಾ ಪ್ರದೇಶದಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಗುಂಡು ಹಾರಿಸಲಾಗಿದೆ. ಗುಂಡೇಟು ತಿಂದಿರುವ ಶಿಂಜೊ ಅಬೆ ತೀವ್ರ ಗಾಯಗಾಳಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾನುವಾರದ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಮಾಜಿ ನಾಯಕ ಶಿಂಜೊ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡೇಟಿನ ಸದ್ದು ಕೇಳಿಬಂದಿದೆ ಎಂದು ರಾಷ್ಟ್ರೀಯ ಪ್ರಸಾರಕ ಎನ್ ಹೆಚ್ ಕೆ ಮತ್ತು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ.
67 ವರ್ಷದ ಅಬೆ ಕುಸಿದುಬಿದ್ದು ಕುತ್ತಿಗೆಯಿಂದ ರಕ್ತಸ್ರಾವವಾಗುತ್ತಿತ್ತು ಎಂದು ಅವರ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮೂಲವೊಂದು ಜಿಜಿ ಸುದ್ದಿ ಸಂಸ್ಥೆಗೆ ತಿಳಿಸಿದೆ.
ಶಿಂಜೆ ಅಬೆ ಭಾಷಣದ ವೇಳೆ ಬಹುಶಃ ಶಾಟ್‌ಗನ್‌ನಿಂದ ಅವರ ಹಿಂದಿನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿವೆ. ತಕ್ಷಣದ ಹೆಚ್ಚಿನ ವಿವರಗಳಿಲ್ಲದಿದ್ದರೂ, ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಎನ್ ಹೆಚ್ ಕೆ ವರದಿ ಮಾಡಿದೆ.
ಜಪಾನ್‌ನ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿ ಅಬೆ 2006 ರಲ್ಲಿ ಒಂದು ವರ್ಷ ಮತ್ತು ಮತ್ತೆ 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು.