ನೀರಿನಲ್ಲಿ ಕೊಚ್ಚಿ ಹೋದ ಯುವಕ, ಸ್ಥಳಕ್ಕೆ ಮಾಜಿ ಶಾಸಕ ನಡಹಳ್ಳಿ ಭೇಟಿ
Former MLA Nadahalli visits the scene of a youth who was swept away in the water
ತಾಳಿಕೋಟೆ 25: ಡೋಣಿ ನದಿಯಲ್ಲಿ ಬುಧವಾರ ಬೈಕ್ ಸಮೇತ ಕೊಚ್ಚಿ ಹೋದ ಸೇತುವ.ೆ ಸ್ಥಳಕ್ಕೆ ರಾಜ್ಯ ರೈತ ಮೋರ್ಚಾ ಅಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಗುರುವಾರ ಭೇಟಿ ನೀಡಿದರು.
ತಾಳಿಕೋಟೆಗೆ ಬಂದಿದ್ದ ವಡವಡಗಿ ಗ್ರಾಮದ ಯುವಕರಿಬ್ಬರು ಮರಳಿ ಹೋಗುವಾಗ ಡೋಣಿ ಸೇತುವೆ ಮೇಲಿನ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದರು. ಅವರಲ್ಲಿ ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಯುವಕ ಇನ್ನೂ ಪತ್ತೆಯಾಗಿಲ್ಲ ಶೋಧ ಕಾರ್ಯ ಮುಂದುವರೆದಿದೆ. ಈ ಬಗ್ಗೆ ಮಾಹಿತಿ ಪಡೆದ ನಡಹಳ್ಳಿ ಅವರು, ಪ್ರವಾಹದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಜೀವ ರಕ್ಷಕ ಸೌಲಭ್ಯಗಳು ಹಾಗೂ ತಕ್ಷಣದ ಪರಿಹಾರ ಒದಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಆಗ್ರಹಿಸಿದರು. ಸ್ಥಳದಲ್ಲಿಯೇ ಬೀಡುಬಿಟ್ಟಿರುವ ದುಃಖಿತ ಕುಟುಂಬಗಳಿಗೆ ಧೈರ್ಯ ತುಂಬಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ತಾಲ್ಲೂಕಾಡಳಿತ ಆಡಳಿತ ತುರ್ತು ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.
ತಹಶೀಲ್ದಾರ ಡಾ.ವಿನಯಾ ಹೂಗಾರ, ಪಿಎಸೈ ಜ್ಯೋತಿ ಖೋತ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿ, ಪುರಸಭೆ ಸದಸ್ಯ ವಾಸುದೇವ ಹೆಬಸೂರ ಮತ್ತು, ನಿಂಗನಗೌಡ ಕುಂಟೋಜಿ, ಕಳಕೂಸಾ ರಂಗರೇಜ,ಶಿವಶಂಕರ ಹಿರೇಮಠ, ಡಿ.ಕೆ.ಪಾಟೀಲ, ಜಗದೀಶ ಬಿಳೇಭಾವಿ, ಪ್ರಭು ಬಿಳೇಭಾವಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 