ಹೂವಿನ ಹಡಗಲಿ

ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕೃಷ್ಣನಾಯ್ಕ ಬಿಜೆಪಿಗೆ ಸೇರ್ಪಡೆ

ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕೃಷ್ಣನಾಯ್ಕ ಬಿಜೆಪಿಗೆ ಸೇರ್ಪಡೆ

ಲೋಕದರ್ಶನ ವರದಿ

ಹೂವಿನಹಡಗಲಿ 05: ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕಾಂಗ್ರೆಸ್ ಯುವ ಮುಖಂಡ ಎಲ್.ಕೃಷ್ಣನಾಯ್ಕ ಅವರು ಮಂಗಳವಾರ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಸಚಿವ ಶ್ರೀರಾಮುಲು,ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಅವರ ಸಮ್ಮುಖದಲ್ಲಿ ನಂದಿಹಳ್ಳಿ ಹಾಲಪ್ಪ,ಎಲ್.ಕೃಷ್ಣನಾಯ್ಕ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದ್ದ ಎಂ.ಪರಮೇಶ್ವರಪ್ಪ, ಯುವ ಮುಖಂಡ ಎನ್.ಕೋಟೆಪ್ಪ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಮಾ.27ರಂದು ಬಿಜೆಪಿ ಸೇರ್ಪಡೆಗೆ ಇಲ್ಲಿನ ಬಿಜೆಪಿ ಆಕಾಂಕ್ಷಿಗಳು,ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.ಆದರೆ ರಾಜ್ಯ ಘಟಕದ ಕಚೇರಿಯ ಆಹ್ವಾನದಿಂದ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಪಿ.ಪ್ರಕಾಶ್ ರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. 2008ರಲ್ಲಿ ಕ್ಷೇತ್ರ ಪುನರ್ವಿಂಗಡನೆಯಾದ ನಂತರ ಎಂ.ಪಿ.ಪ್ರಕಾಶ್ ಕಾಂಗ್ರೆಸ್ ಸೇರ್ಪಡೆಗೆ ವಿರೋಧಿಸಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಕಾಂಗ್ರೆಸ್ ಬಂದು ಶಾಸಕರ ಜತೆಗೆ ಸಹೋದರರಂತೆ ಎರಡು ಚುನಾವಣೆಯಲ್ಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಜತೆಗಿದ್ದರು.2023ರ ಚುನಾವಣೆಯಲ್ಲಿ ಪಿಟಿ.ಪರಮೇಶ್ವರನಾಯ್ಕರನ್ನು ವಿರೋಧಿಸಿ ಸ್ಥಳೀಯ ಅಭ್ಯರ್ಥಿ  ಕೃಷ್ಣನಾಯ್ಕ ಜತೆಗೆ ಇದ್ದು, ಇದೀಗ ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಗುಡ್ ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಬಾರಿ ಟಿಕೆಟ್ ನೀಡಿದರೇ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಕೃಷ್ಣನಾಯ್ಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು 

ಸುದ್ದಿ ಓದಿ