ಮಾಜಿ ಸಚಿವ, ಕೆಎಲ್ಇ ಮಾಜಿ ಅಧ್ಯಕ್ಷ ಶಿವಾನಂದ ಕೌಜಲಗಿ ನಿಧನ
ಬೈಲಹೊಂಗಲ, ಅ.30: ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಎಚ್. ಕೌಜಲಗಿ ಅವರು ಶುಕ್ರವಾರ ಬೆಳಗ್ಗೆ ನಿಧನರಾದರು.
ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ಪುರಸ್ಕಾರಗಳು ಲಭಿಸಿದ್ದವು.
ಮೃತರು ಪತ್ನಿ, ಶಾಸಕ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಗಂಟೆಗೆ ಬೈಲಹೊಂಗಲದ ಆನಿಗೋಳ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.