ಕೇಂದ್ರದ ಮಾಜಿ ಸಚಿವ ಬಿ. ಶಂಕರಾನಂದರ ಕಂಚಿನ ಪುತ್ಥಳಿ ಅನಾವರಣ ಇಂದು
ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಹೆಚ್ಚಿನ ಅವಧಿಗೆ ಸಂಸತ್ತಿಗೆ ಆಯ್ಕೆ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದ ಕೇಂದ್ರದ ಮಾಜಿ ಸಚಿವ ಬಿ. ಶಂಕರಾನಂದ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮವು ಇಂದು (ಬುಧವಾರ) ನಡೆಯಲಿದೆ. ಈ ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.
ಬೆಳಗಾವಿಯ ಕ್ಲಬ್ ರಸ್ತೆಗೆ, ವೃತ್ತಕ್ಕೆ ಬಿ. ಶಂಕರಾನಂದ ಅವರ ಹೆಸರು ನಾಮಕರಣ ಮಾಡಲಾಗಿದೆ. ಇದೇ ಸ್ಥಳದಲ್ಲಿ ಇಂದು ದಿ. 17ರಂದು ಸಂಜೆ 4 ಗಂಟಗೆ ನಡೆಯಲಿರುವ ಈ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳರ ಇವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇರ್ ಅವರು ವಹಿಸಲಿದ್ದಾರೆ.