ಹಗರಿಬೊಮ್ಮನಹಳ್ಳಿ

ಹಗರಿಬೊಮ್ಮನಹಳ್ಳಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಗರಿಬೊಮ್ಮನಹಳ್ಳಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಗರಿಬೊಮ್ಮನಹಳ್ಳಿ11 : ಪಟ್ಟಣಕ್ಕೆ ಇಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಎಸ್‌.ಭೀಮನಾಯ್ಕ್‌ ತಿಳಿಸಿದರು. 

ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಬುಧವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡುತ್ತಾ ಕ್ಷೇತ್ರದ ಹತ್ತಾರು ಅಭಿವೃದ್ಧಿ ಕೆಲಸಗಳಿಗೆ ಕಾಂಗ್ರೇಸ್ ಪಕ್ಷದ ಅಧಿಕಾರಾವಧಿಯಲ್ಲಿ ಮುಖ್ಯ ಮಂತ್ರಿಗಳಾಗಿದ್ದಾಗ  ಅನುದಾನಗಳ ಮಹಾಪೂರವನ್ನೆ ನೀಡಿದ ಮಾಜಿ ಮುಖ್ಯಮಂತ್ರಿ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ಯ ಆಗಮಿಸಲಿದ್ದು, ಹೆಲಿಪ್ಯಾಡ್‌ನಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕ್ಷೇತ್ರದ 252 ಬೂತ್‌ಗಳಿಂದ ಆಗಮಿಸುತ್ತಿರುವ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ನಂತರ ಪಟ್ಟಣದ ಹರ ದೇಗುಲದಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಬಾದಾಮಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಹಿತಿ ನೀಡಿದರು. 

ಬುಡ್ಡಿ ಬಸವರಾಜ, ಎಂ.ಪಿ.ಕೊಟ್ರೇಶ್, ಕನ್ನಿಹಳ್ಳಿ ಚಂದ್ರಶೇಖರ್, ಕುಬರ ಸಂಘದ ರಾಜ್ಯ ನಿರ್ದೇಶಕ ಮರಿ ರಾಮಣ್ಣ, ಪವಾಡಿ ಹನುಮಂತಪ್ಪ, ನೆಲ್ಲು ಈಸ್ಮಾಯಿಲ್, ಮುಟಗನಹಳ್ಳಿ ಕೊಟ್ರೇಶ್ ಇದ್ದರು. 


ಸುದ್ದಿ ಓದಿ