ಅಂತರರಾಷ್ಟ್ರೀಯ

ಮಾಜಿ ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ ನಿಧನ

ಮಾಜಿ ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ ನಿಧನ

ಲಕ್ನೋ, ಮೇ 8:  ಮಾಸ್ಕೋ  ಒಲಿಂಪಿಕ್ ಚಿನ್ನದ ಪದಕ ವಿಜೇತ, ಮಾಜಿ ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ (65) ಕರೋನ ಸೋಂಕಿನಿಂದ  ಶನಿವಾರ ನಿಧನ ಹೊಂದಿದರು. 

ರವೀಂದರ್ ಪಾಲ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು  ಕಳೆದ 24ರಂದು ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಸೋಂಕಿನಿಂದ ಗುಣಮುಖರಾಗಿದ್ದ ಅವರನ್ನು ನಂತರ  ನಾನ್ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು ಎಂದು ರವೀಂದರ್ ಕುಟುಂಬದ ಮೂಲಗಳು ತಿಳಿಸಿವೆ.

ಆದರೆ ಶುಕ್ರವಾರ ಅವರ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟ ಕಾರಣ ಅವರಿಗೆ ವೆಂಟಿಲೇಟರ್ ಅಳವಡಿಲಾಯಿಗಿತ್ತು ಎಂದೂ ತಿಳಿಸಲಾಗಿದೆ.

ಸುದ್ದಿ ಓದಿ