ಕಾಗವಾಡ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮಾಜಿ ಸಚಿವ ಶ್ರೀಮಂತ ಪಾಟೀಲ್

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮಾಜಿ ಸಚಿವ ಶ್ರೀಮಂತ ಪಾಟೀಲ್


             ಕಾಗವಾಡ 27 : ಭಾರತೀಯ  ಜನತಾ ಪಕ್ಷದ ಹಿರಿಯ ನಾಯಕರು, ಕೇಂದ್ರ ಸಚಿವರು ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶಿ ಪ್ರಲ್ಹಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ಮಾಜಿ ಸಚಿವರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಅವರು ಖುದ್ದಾಗಿ ಭೇಟಿಯಾಗಿ ಹೂಗುಚ್ಛ ನೀಡಿ ಆತ್ಮೀಯವಾಗಿ ಶುಭಾಶಯ ಕೋರಿದರು.

            ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮಂತ ಪಾಟೀಲ್ ಅವರು, "ಪಕ್ಷದ ಹಿರಿಯ ನಾಯಕರಾದ ಪ್ರಲ್ಹಾದ್ ಜೋಶಿ ಅವರು ತಮ್ಮ ದಕ್ಷ ಹಾಗೂ ಪಾರದರ್ಶಕ ನಾಯಕತ್ವದ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ.

              ದೇಶದ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಸಾರ್ವಜನಿಕ ಜೀವನದಲ್ಲಿ ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ಮತ್ತು ಯಶಸ್ಸು ಲಭಿಸಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತೇನೆ" ಎಂದರು.ಹುಟ್ಟುಹಬ್ಬದ ಶುಭಾಶಯ ಕೋರುವ ವೇಳೆ ಉಭಯ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಕುರಿತು ಕೆಲಕಾಲ ಸೌಹಾರ್ದಯುತವಾಗಿ ಚರ್ಚೆ ನಡೆಸಿದರು. 


ಸುದ್ದಿ ಓದಿ