ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ದುರ್ವಾಸನೆ: ರೈಲ್ವೆ ಹೋರಾಟ ಸಮಿತಿ ಆಕ್ರೋಶ
Foul smell at Kittur Chennamma Park: Railway Agitation Committee expresses outrage
ಲೋಕದರ್ಶನ ವರದಿ
ಬೆಟಗೇರಿ, ಸೆ. 27: ಹಲವು ವರ್ಷಗಳ ಇತಿಹಾಸ ಹೊಂದಿರುವ ಬೆಟಗೇರಿಯ ಪಿ.ಬಿ. ರಸ್ತೆಯಲ್ಲಿರುವ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ದುರ್ವಾಸನೆ ಬೀರುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಬೆಟಗೇರಿ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬಾಳಿ ಆತಂಕ ವ್ಯಕ್ತಪಡಿಸಿದ್ದಾರೆ.
ಉದ್ಯಾನವನಕ್ಕೆ ಹೊಂದಿಕೊಂಡಿರುವ ನಾಲಾದ ಗಲೀಜು ನೀರು ಉದ್ಯಾನವನದ ಜಿಮ್ ಇರುವ ಭಾಗದಲ್ಲಿ ಹರಿದು ಬಂದು, ಅಲ್ಲಿಯೇ ನಿಂತುಕೊಳ್ಳುತ್ತಿರುವುದರಿಂದ ದುರ್ವಾಸನೆ ಉಂಟಾಗುತ್ತಿದೆ. ಇದರಿಂದ ಉದ್ಯಾನವನಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, ಇದೇ ಪ್ರದೇಶದಲ್ಲಿ ಸಾರ್ವಜನಿಕ ಗ್ರಂಥಾಲಯವೂ ಇದ್ದು, ಪ್ರತಿನಿತ್ಯ ಪತ್ರಿಕೆಗಳನ್ನು ಓದಲು ಬರುವ ನಾಗರಿಕರಿಗೂ ದುರ್ವಾಸನೆಯಿಂದಾಗಿ ಗ್ರಂಥಾಲಯದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗಣೇಶಸಿಂಗ್ ಬಾಳಿ ದೂರಿದ್ದಾರೆ.
ಉದ್ಯಾನವನದಲ್ಲಿ ಶೌಚಾಲಯದ ವ್ಯವಸ್ಥೆಯೂ ಇಲ್ಲದಿರುವುದರಿಂದ ಪರಿಸರವು ಮತ್ತಷ್ಟು ದುರ್ವಾಸನೆಯಿಂದ ಕೂಡಿದೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ನೂರಾರು ಜನರು ವಾಯುವಿಹಾರಕ್ಕಾಗಿ ಉದ್ಯಾನವನಕ್ಕೆ ಬರುತ್ತಾರೆ. ಆದರೆ ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಮಸ್ಯೆ ಕುರಿತು ಹಲವು ಬಾರಿ ಗದಗ-ಬೆಟಗೇರಿ ನಗರಸಭೆಯ ಆಡಳಿತಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರಿಗೆ ಸಮಿತಿ ಮತ್ತು ಸಾರ್ವಜನಿಕರ ವತಿಯಿಂದ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 