ಶಾಲಾ ವಾಹನ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಸಾವು

 28ಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿ ಪಾಲಕರಿಗೆ ಗಂಭೀರ ಗಾಯ  

ಜಮಖಂಡಿ 29: ಶಾಲಾ ವಾಹನ ಭೀಕರ ಅಪಘಾತ ನಾಲ್ವರು ವಿದ್ಯಾರ್ಥಿಗಳು ಸಾವು, 28 ಕೂ ಅಧಿಕ ವಿದ್ಯಾರ್ಥಿಗಳಿಗೆ ಸೇರಿ ಪಾಲಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. 

ತಾಲ್ಲೂಕಿನ ಆಲಗೂರ ಗ್ರಾಮದ ವರ್ಧಮಾನ ನ್ಯಾಮಗೌಡ ಖಾಸಗಿ ಶಾಲೆಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ವಾರ್ಷಿಕ ಸ್ನೇಹ ಸಮ್ಮೇಳನ ಮುಗಿಸಿಕೊಂಡು ಶಾಲಾ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತದಲ್ಲಿ ಕವಟಗಿ ಗ್ರಾಮದ ವಿದ್ಯಾರ್ಥಿ ಗೋವಿಂದ ಸದಾಶಿವ ಜಂಬಗಿ(13), ಶ್ವೇತಾ ಶಿವನಗೌಡ ಪಾಟೀಲ(12), ಬಸವರಾಜ ಕೊಟ್ಟಗಿ(17), ಸಾಗರ ಗುರಲಿಂಗ ಕಡಕೋಳ(16) ಸಾವನಪ್ಪಿದ್ದ ಘಟನೆ ಸಂಭವಿಸಿದೆ. 

ರಸ್ತೆಯ ಮೇಲೆ ನಿಲ್ಲಿಸಿದ ಕಬ್ಬಿನ ಟ್ರ್ಯಾಕ್ಟರ್‌ಗೆ ಹಾಯಿಸಿದ ಪರಿಣಾಮ ನಾಲ್ಕು ವಿದ್ಯಾರ್ಥಿಗಳು ಸಾವನಪ್ಪಿದ್ದು. ಎರಡು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 28 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ವಿದ್ಯಾರ್ಥಿಗಳನ್ನು ಪಾಲಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ರವಾನಿಸಲಾಗಿದೆ. 

ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು. ಸರ್ಕಾರಿ ಆಸ್ಪತ್ರೆಗೆ ಹಾಗೂ ಘಟನಾ ಸ್ಥಳಕ್ಕೆ ತಡ ರಾತ್ರಿಗೆ ಜಿಲ್ಲಾ ಎಸ್,ಪಿ, ಅಮರನಾಥ ರೆಡ್ಡಿ ಭೇಟಿ ನೀಡಿ ಪರೀಶೀಲನೆ ಮಾಡಿದ್ದಾರೆ. ಸರಕಾರಿ ಉಪವಿಭಾಗ ಆಸ್ಪತ್ರೆಗೆ  ಮಾಜಿ ಶಾಸಕ ಆನಂದ ನ್ಯಾಮಗೌಡ, ಶಾಸಕ ಜಗದೀಶ ಗುಡಗುಂಟಿ ಭೇಟಿ ನೀಡಿ. ಕುಟುಂಬಸ್ಥರಿಗೆ ಸ್ವಾಂತಾನ ಹೇಳಿದ್ದರು.  

ಸಂಸದ ಪಿ.ಸಿ.ಗದ್ದಿಗೌರ, ತೇರದಾಳ ಶಾಸಕ ಸಿದ್ದು ಸವದಿ, ಜಿಲ್ಲಾಧಿಕಾರಿ ಎಸ್‌.ಜಾನಕಿ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕೋರೆರೆ, ಎಸಿ.ಸಂತೋಷ ಕಾಮಗೊಂಡ, ಡಿ.ಎಸ್‌.ಪಿ.ಶಾಂತವೀರ ಈ, ತಹಶೀಲ್ದಾರ ಸದಾಶಿವ ಮಕ್ಕೋಜಿ, ಬಿಇಒ ಅಶೋಕ ಬಸನ್ನವರ, ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಅಸ್ಟಗಿ, ಸಿಪಿಐ ಮಲ್ಲಪ್ಪ ಮಡ್ಡಿ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ. 

ಆಲಗೂರ ಗ್ರಾಮದಲ್ಲಿ ಶಾಲಾ ಮಕ್ಕಳ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ  ಜೊತೆಯಲ್ಲಿ ಪೋನ್ ಕರೆಗಳ ಮೂಲಕ ಮಾತನಾಡುವ ಪ್ರಯತ್ನ ಮಾಡಲಾಗಿದೆ. ಅವರು ಬೆಳಗಿನ ಜಾವವಾದರಿಂದ ಪೋನ್ ಕರೆ ಸ್ವೀಕರಿಸುತ್ತಿಲ್ಲ. ಸರಕಾರದಿಂದ ಪರಿಹಾರವನ್ನು ನೀಡುವ ವ್ಯವಸ್ಥೆಯನ್ನು ಮಾಡುತ್ತೆನೆ. 

ಮಾಜಿ ಶಾಸಕ ಆನಂದ ನ್ಯಾಮಗೌಡ, 

ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಮಾತನಾಡಲಾಗಿದೆ. ಸರಕಾರದ ಮಟ್ಟದಲ್ಲಿ ಬರುವ ಪರಿಹಾರವನ್ನು ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ನನ್ನ ವ್ಯಯಕ್ತಿಕವಾಗಿ ಸಾವನ್ನಪ್ಪಿದ ಪ್ರತಿಯೊಂದು ಕುಟುಂಬಕ್ಕೆ 25 ಸಾವಿರ ರೂ,ಗಳನ್ನು ನೀಡುತ್ತೇನೆ. 

ಶಾಸಕ ಜಗದೀಶ ಗುಡಗುಂಟಿ, 

ಶಾಲಾ ವಾನಹನದ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್‌.ಬಿ.ತಿಮ್ಮಾಪೂರ ಅವರು ಘೋಷಣೆಯನ್ನು ಮಾಡುತ್ತಾರೆ. ಇವಾಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಉಚಿತ ಚಿಕಿತ್ಸೆ ನೀಡಲು ಕರೆಯನ್ನು ನೀಡಲಾಗಿದೆ. ವಿದ್ಯಾರ್ಥಿಗಳ ಕುಟುಂಬಕ್ಕೆ ಸ್ವಾಂತಾನವನ್ನು ತಿಳಿಸುತ್ತೇನೆ. ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ. 

ಜಿಲ್ಲಾಧಿಕಾರಿ ಎಸ್‌.ಜಾನಕಿ