ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಶಿಬಿರ
ಲೋಕದರ್ಶನ ವರದಿ
ಗೋಕಾಕ 27: ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಯುವನಾಯಕ ಹಾಗೂ ಕೆಎಮ್ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಆಯೋಜಿಸಲಾದ ಉಚಿತ ಕಣ್ಣಿ ಪೊರೆ ಚಿಕಿತ್ಸೆ ಶಿಭಿರ ಕಾರ್ಯಕ್ರಮಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಮಾತನಾಡಿ, ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಲಹೆಯ ಮೇರೆಗೆ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಹಿರಿಯ ನಾಗರಿಕರಿಗೆ ಎರಡು ದಿನಗಳ ಕಾಲ ಉಚಿತ ಕಣ್ಣಿನ ಪೊರೆ ಚಿಕಿತ್ಸೆ ನೀಡಲಾಗುತ್ತಿದ್ದು, ನಾಗರಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಡಿಎಚ್ಒ ಡಾ.ಮುನ್ಯಾಳ, ಟಿಎಚ್ಒ ಡಾ.ಮುತ್ತಣ್ಣ ಕೊಪ್ಪದ, ಮುಖ್ಯವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಡಾ.ಬಾಗಲಕೊಟ, ಡಾ.ಶಾಂತಕುಮಾರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ ಸೇರಿದಂತೆ ನಗರಸಭೆ ಸದಸ್ಯರು, ಜಾರಕಿಹೊಳಿ ಅಭಿಮಾನಿ ಬಳಗದವರು ಇದ್ದರು.