ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

ಕುಮಟಾ03: ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಕುಮಟಾದಲ್ಲಿ ಎಪ್ರೀಲ್ ತಿಂಗಳಲ್ಲಿ ನಡೆಯುವ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ - 45 ದಿವಸಗಳು ಉಚಿತ ತರಬೇತಿಯು ಏ. 10 ರಿಂದ 24ರವರೆಗೆ ನಡೆಯಲಿದೆ.

ಈ ತರಬೇತಿಯಲ್ಲಿ ಕನ್ನಡ ಮತ್ತು ಇಂಗ್ಲೀಷ ಟೈಪಿಂಗ್, ಪೋಟೋಶೋಪ್, ಕೊರಲ್ಡ್ರಾ, ಇಂಟರ್ನೆಟ್, ಎಕ್ಸೆಲ್, ಪವರ್ ಪಾಯಿಂಟ್, ಪೆಜ್ಮೆಕರ್ ಹೀಗೆ ಮುಂತಾದ ವಿಷಯಗಳನ್ನು ಕಲಿಸಲಾಗುವುದು. 

ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು,   ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಇಂಗ್ಲೀಷ ಮತ್ತು ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ  ಜ್ಞಾ.ನವಿರಬೇಕು.

ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ -581343 ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ 08386-220530, 9449860007,  9538281989, 9916783825, 8880444612, 9620962004, ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. 

ಸೂಚನೆ: ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. 

ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ ಕಾರ್ಡ, ಬ್ಯಾಂಕ್ ಪಾಸ್ಬುಕ್, ಪಾನ್ ಕಾಡರ್್ ಇವುಗಳ  ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಸ್ವ ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ