18ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ ಲಸಿಕೆ
ಬಳ್ಳಾರಿ 08: ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ 36ನೇ ವಾರ್ಡಿನ ಕುರಿಹಟ್ಟಿ 1ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಕೇಂದ್ರ ಸರ್ಕಾರದ ಆದೇಶದ ನಿರ್ದೇಶನದಂತೆ 18ವರ್ಷಕ್ಕೂ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಕೋವಿಡ್-19ರ ಲಸಿಕೆ ಹಾಕಲಾಯಿತು. ಈ ಸಂದರ್ಭದಲ್ಲಿ 36ನೇ ವಾರ್ಡಿನ ಮಹಾನಗರ ಪಾಲಿಕೆ ಸದಸ್ಯ ಕಲ್ಪನಾ, ಬಿಜೆಪಿ ಮುಖಂಡ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಪಿ.ವೆಂಕಟರಾಮಿರೆಡ್ಡಿ ಅವರುಗಳ ಮುತುವರ್ಜಿಯಿಂದ, ಈ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟಲು ಕೊರೋನಾ ವೈರಾಣು ಹರಡದಂತೆ ನಿಯಂತ್ರಿಸಲು ಕೇಂದ್ರ ಸಕಾರದ ಮಾನ್ಯತೆ ಪಡೆದ ಕೋವಿಡ್ ಲಸಿಕೆಯನ್ನು 18ವರ್ಷಕ್ಕೂ ಮೇಲ್ಪಟ್ಟ ಸಾರ್ವಜನಿಕರಿಗಾಗಿ ಉಚಿತವಾಗಿ ನೀಡಲಾಯಿತು. ಬೆಳಿಗ್ಗೆ 9.30ರಿಂದ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.