ಉಚಿತ ಆರೋಗ್ಯ ತಪಾಸಣಾ ಶಿಬಿರ
ಲಕ್ಷೆö್ಮÃಶ್ವರ ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಶಿರಹಟ್ಟಿ/ಲಕ್ಷೆö್ಮÃಶ್ವರ ಹಾಗೂ Sಆಒ ನಾರಾಯಣ ಹಾರ್ಟ್ ಸೆಂಟರ್, ಧಾರವಾಡ ಮತ್ತು ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷೆö್ಮÃಶ್ವರ ತಾಲ್ಲೂಕಿನ ಬಾಳೆಹೊಸೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಕಲ್ಪವೃಕ್ಷಕ್ಕೆ ನೀರುಣಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಯೋಜನಾಧಿಕಾರಿ ಪುನೀತ್ ಒಲ್ಲೇಕಾರ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗದಗ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ಪ್ರಕಾಶ್ ಹೊಸಮನಿ ಅವರು ಮಾತನಾಡಿ, ಉಚಿತ ಆರೋಗ್ಯ ತಪಾಸಣಾ ಶಿಬಿರದ ಮಹತ್ವವನ್ನು ವಿವರಿಸಿದರು. Sಆಒಅ ಸದಸ್ಯ ದೇವೇಂದ್ರಪ್ಪ ರಾಮಚಂದ್ರಪ್ಪ ಬಡಿಗೇರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಾಳೆಹೊಸೂರು ವೈದ್ಯರಾದ ಡಾ. ಡಿ.ಡಿ. ಬಡೇಖಾನ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಫಕೀರೇಶ್ ಮಾಳತನ್ನವರ, ನಾಗಯ್ಯ ಮಠಪತಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಯಲ್ಲಪ್ಪ ಸೂರಣಗಿ, Sಆಒ ನಾರಾಯಣ ಹಾರ್ಟ್ ಸೆಂಟರ್, ಧಾರವಾಡದ ಡಾ. ಸಿಂಧು ಜಂತಿ, ಶೇಖರಗೌಡ ವಡಕಣಗೌಡರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೩೦೦ ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕೃಷಿ ಮೇಲ್ವಿಚಾರಕರಾದ ಭೀಮಪ್ಪ ಹಾರೂಗೇರಿ, ತಾಲ್ಲೂಕಿನ ಖಿಓಔ ಸಚಿನ್, ಸೇವಾ ಪ್ರತಿನಿಧಿ ಲಲಿತಾ ಬಾಕಿರ್, ಆಶಾ ಕಾರ್ಯಕರ್ತೆಯರು, ಗ್ರಾಮದ ಗುರುಹಿರಿಯರು ಹಾಗೂ ಗಣ್ಯರು ಭಾಗವಹಿಸಿದ್ದರು.
Sಆಒ ನಾರಾಯಣ ಹಾರ್ಟ್ ಸೆಂಟರ್, ಧಾರವಾಡ ಹಾಗೂ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗದ ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ತಂತ್ರಜ್ಞರು ಶಿಬಿರದ ಯಶಸ್ಸಿಗೆ ಸಹಕರಿಸಿದರು.