ಉಚಿತ ಆರೋಗ್ಯ ತಪಾಸಣಾ ಶಿಬಿರ: ಮೊಣಕಾಲು, ಮಂಡಿ ಚಿಪ್ಪು ಮತ್ತು ಚಪ್ಪೆ ಬದಲಾವಣೆ ಶಸ್ತ್ರಚಿಕಿತ್ಸೆಗೆ ನೆರವು
Free Health Check-up Camp: Assistance for Knee, Kneecap, and Ankle Replacement Surgeries
ಲೋಕದರ್ಶನ ವರದಿ
ಕಂಪ್ಲಿ 18: ಸಮಾಜಮುಖಿ ಕಾರ್ಯಗಳ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಡಾ. ಸಂಜೀವ್ ಎಂ. ಮುದ್ರಿ ಹೇಳಿದರು. ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳಿ ಹಾಗೂ ರಾಣೆಬೆನ್ನೂರು ಲಕ್ಷ್ಮೀ ಸರ್ಜಿಕಲ್ ಟ್ರಾಮಾ ಆರ್ಥೋ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಡಾ. ಮುದ್ರಿ ಆಸ್ಪತ್ರೆ) ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಮೊಣಕಾಲು ಮಂಡಿ ಚಿಪ್ಪು ಹಾಗೂ ಚಪ್ಪೆ ಬದಲಾವಣೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ವಿಶೇಷ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಪ್ರಮುಖವಾದುದು. ವಯಸ್ಸಾದವರಲ್ಲಿ ಕಾಣಿಸಿಕೊಳ್ಳುವ ಮೊಣಕಾಲು ನೋವು, ಮಂಡಿ ಚಿಪ್ಪು ಹಾಗೂ ಚಪ್ಪೆ ಬದಲಾವಣೆ ಸಮಸ್ಯೆಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ನಂತರ ಮಾತನಾಡಿದ ವೀರಶೈವ ಲಿಂಗಾಯತ ಮಹಾವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್, ಅಕ್ಕಮಹಾದೇವಿ ಮಹಿಳಾ ಮಂಡಳಿಯವರು ಹಲವು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯ. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಚಿತ ಶಿಬಿರಗಳನ್ನು ಆಯೋಜಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿರುವುದು ಉತ್ತಮ ಸೇವೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ಮಂಡಳಿಯವರು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಮಂಡಳಿಗಳನ್ನು ರಚಿಸಿ ಸಮಾಜ ಸೇವೆಯಲ್ಲಿ ಮುಂದಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ. ಶಾರದಾ ಜಗನ್ನಾಥ್ ಹಿರೇಮಠ ಮಾತನಾಡಿ, ಈ ಶಿಬಿರದ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದ್ದು, ಆರೋಗ್ಯ ಸೇವೆಯ ಮೂಲಕ ಸಮಾಜಮುಖಿ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು. ಬಳಿಕ ದೀರ್ಘಕಾಲದ ಮೊಣಕಾಲು ನೋವು, ಚಪ್ಪೆ ನೋವು, ಸೊಂಟ ನೋವು ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದ ರೋಗಿಗಳಿಗೆ ಉಚಿತ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಕ್ಕಿ ಗಿರಣಿ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ, ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎಂ. ನಾಗರಾಜ್, ಅಕ್ಕಮಹಾದೇವಿ ಮಹಿಳಾ ಮಂಡಳಿ ಕಾರ್ಯದರ್ಶಿ ಕಾಮಗಂಡಿ ಲಕ್ಷ್ಮೀ, ಉಪ ಕಾರ್ಯದರ್ಶಿ ಸುಮಂಗಳಾ, ಖಜಾಂಚಿ ಸಿಂಧು ಎಸ್. ಚಂದ್ರಶೇಖರ್ಗೌಡ, ಮುಖಂಡರಾದ ವಾಲಿ ಕೊಟ್ರ್ಪ, ರುದ್ರ್ಪ, ಡಾ. ಜಗನ್ನಾಥ್ ಹಿರೇಮಠ, ಘನಮಠಶಾಸ್ತ್ರಿ, ಕೆ.ಎಂ. ವಾಗೀಶ್, ಎಸ್.ಡಿ. ಬಸವರಾಜ್, ಸುಜಾತಾ, ಕೋಟೆ ಅರವಿಂದ್, ಅನುಪಮಾ, ಕೋರಿ ಜಯ, ಮುಕ್ಕುಂದಿ ಶಿವಗಂಗಮ್ಮ, ಕೆ. ನಾಗರತ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 