ಬಳ್ಳಾರಿ

ಬಡಜನರಿಗೆ ಉಚಿತ ಕಾನೂನು ನೆರವು: ದೊಡ್ಡಮನಿ

ಬಡಜನರಿಗೆ ಉಚಿತ ಕಾನೂನು ನೆರವು:  ದೊಡ್ಡಮನಿ

ಬಳ್ಳಾರಿ 13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವು ಸಂಗನಕಲ್ಲು, ಸಿರಿವಾರ ಹಾಗೂ ಕಪ್ಪಗಲ್ಲು ಗ್ರಾಮಗಳಲ್ಲಿ ಸೋಮವಾರ ನಡೆಯಿತು. 

1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸದಾನಂದ ಎಂ.ದೊಡ್ಡಮನಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವರದಕ್ಷಿಣೆ, ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆಗಳು, ಲೈಂಗಿಕ ದೌರ್ಜನ್ಯ ಹಾಗೂ ಇನ್ನಿತರ ಕಾನೂನು ಪ್ರಕರಣಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.  

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಡ ಜನರಿಗೆ, ದೀನ ದಲಿತ ಕುಟುಂಬ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಕಾನೂನು ನೆರವು ನೀಡಲಾಗುವುದು ಎಂದು ಹೇಳಿದರು.   

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಯರೆ​‍್ರಗೌಡ ಮಾತನಾಡಿದರು. 

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ತ್ರಿವೇಣಿ ಪತ್ತಾರ, ವಕೀಲರು ಹಾಗೂ ಸಾರ್ವಜನಿಕರು ಇದ್ದರು. 


ಸುದ್ದಿ ಓದಿ