ಉಚಿತ ಬೆನ್ನುಮೂಳೆ ತಪಾಸಣಾ ಶಿಬಿರ
Free Spinal Cord Check-up Camp
ಲೋಕದರ್ಶನ ವರದಿ
ವಿಜಯನಗರ (ಹೊಸಪೇಟೆ), ಆ.5: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, 60 ಹಾಸಿಗೆಗಳ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಬೆನ್ನುಮೂಳೆ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಸ್ಕೋಲಿಯೊಸಿಸ್ (ಖಛಿಠ) ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ತಪಾಸಣೆ ನಡೆಸುವುದು ಶಿಬಿರದ ಉದ್ದೇಶ ಎಂದು ತಿಳಿಸಿದರು.
ಒಟ್ಟು 9 ಮಕ್ಕಳನ್ನು ತಪಾಸಣೆ ಮಾಡಲಾಗಿದ್ದು, 4 ಮಕ್ಕಳಿಗೆ ಮುಂದಿನ ಚಿಕಿತ್ಸೆಗಾಗಿ ಸೂಚನೆ ನೀಡಲಾಗಿದೆ. 7 ಪ್ರಕರಣಗಳನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಇಬ್ಬರನ್ನು ಎಕ್ಸ್‌ರೇ ಪರೀಕ್ಷೆಗೆ ಒಳಪಡಿಸಲಾಗಿದೆ.
ಜಿಲ್ಲಾ ಆರಿ್ಸಎಚ್ ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, ದುಬಾರಿ ವೆಚ್ಚದ ಬೆನ್ನುಮೂಳೆ ಶಸ್ತ್ರಚಿಕಿತ್ಸೆಯನ್ನು ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ರಾಧಿಕಾ, ಡಾ. ನೂರ್ ಪಾಷಾ, ಡಾ. ಅಲೋಕ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 