ಮಕ್ಕಳಿಗೆ ಉಚಿತ ಲಸಿಕಾ ಅಭಿಯಾನ
ಸಿಂದಗಿ05: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುತ್ತಿರುವುದರಿಂದ ಮಕ್ಕಳಲ್ಲಿ ಉಂಟಾಗುತ್ತಿರುವ ಕರೋನಾ ಭಯವನ್ನು ದೂರ ಮಾಡಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಆರೋಗ್ಯದ ದೃಷ್ಠಿಯಿಂದ ಅತ್ಯಂತ ಸುರಕ್ಷಿತರಾಗಿರುತ್ತಾರೆ. ಪಾಲಕರು ಕೂಡಾ ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡುತ್ತಾರೆ ಎಂದು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಅಧ್ಯಕ್ಷ ಅಶೋಕ ಮನಗೂಳಿ ಹೇಳಿದರು.
ಸೋಮವಾರ, ಪಟ್ಟಣದ ಎಚ್.ಜಿ. ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ 15 ರಿಂದ 18 ವಯಸ್ಸಿನ ಮಕ್ಕಳಿಗೆ ಉಚಿತ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಶಾಲಾ ಮಕ್ಕಳಿಗೆ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಕೊಡುವ ಅಭಿಯಾನ ಇಂದಿನಿಂದ ಆರಂಭವಾಗಿದೆ. ಎಲ್ಲ ಮಕ್ಕಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಎಸ್.ಡಿ. ಕುಲಕರ್ಣಿ ಮಾತನಾಡಿ, ದೇಶದ ಶಿಕ್ಷಣದ ವ್ಯವಸ್ಥೆಯೆ ಕೊರೋನಾಕ್ಕೆ ಬಲಿಯಾದಂತಿದೆ. ಅದನ್ನು ಯತಾಸ್ಥಿತಿಗೆ ತರುವಲ್ಲಿ ನಾವೇಲ್ಲ ಶ್ರಮವಹಿಸಬೇಕೆಂದರೆ ದೇಶದ ಪ್ರತಿಯೊಬ್ಬರು ಲಸಿಕೆಯನ್ನು ಕಡ್ಡಾಯವಾಗಿ ಪಡೆಯಲೇಬೇಕು. 15-18 ವಯಸ್ಸಿನ ಮಕ್ಕಳಿಗೆ ಸದ್ಯಕಡ್ಡಾಯ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೆ ಭಯವಿಲ್ಲದೆ ಲಸಿಕೆಯನ್ನು ಪಡೆದುಕೊಳ್ಳಬೇಕು. ಕೋವಿಡ್‌್‌ಗೆ ಸಂಭಂದಿಸಿದ ಸರ್ಕಾರದ ಎಲ್ಲ ನಿಯಮಗಳನ್ನು ಪಾಲನೇ ಮಾಡುವುದು ಅನಿವಾರ್ಯವಾಗಿದೆ ಎಂದರು.
ಪ್ರಾಚಾರ್ಯ ಎ.ಆರ್. ಹೆಗ್ಗಣದೊಡ್ಡಿ ಮಾತನಾಡಿ, ಸರ್ಕಾರದ ನಿಯಮದಂತೆ ಮಹಾವಿದ್ಯಾಲಯದಲ್ಲಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಒಂದೇ ದಿನದಲ್ಲಿ 458 ವಿದ್ಯಾರ್ಥಿಗಳಿಗೆ ನಾವು ಲಸಿಕೆಯನ್ನು ನೀಡಿದ್ದೇವೆ. ಮುಂಬರುವ ದಿನಗಳಲ್ಲಿ ಬಾಕಿ ಉಳಿದ ವಿದ್ಯಾರ್ಥಿಗಳಿಗೂ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಸಂಸ್ಥೆಯ ನಿರ್ದೇಶಕ ಶಿರುಗೌಡ ದೇವರಮನಿ, ಶ್ರೀಶೈಲಗೌಡ ಬಿರಾದಾರ, ಆರೋಗ್ಯ ಇಲಾಖೆಯ ಡಾ.ಮಹಾಂತೇಶ ಹಿರೇಮಠ, ವಿರೇಂದ್ರ ಪವಾಡೆ, ಪ್ರಭು ಜಂಗಿಮನಮಠ, ರಾಕೇಶ ಹೂಗಾರ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕಾಲೇಜಿನ ಉಪನ್ಯಾಸಕರು ಇದ್ದರು.