ಚಿಕ್ಕೊಡಿಯಲ್ಲಿ ಉಚಿತ ಬಸ್ ಪಾಸ್ ವಿತರಣೆ
Free bus pass distribution in Chikkodi
ಲೋಕದರ್ಶನ ವರದಿ
ಬೆಳಗಾವಿ 16: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗಕ್ಕೆ ಜೂನ್ 15 2026 ರಂದು ವಾ.ಕ.ರ.ಸಾ.ಸಂಸ್ಥೆ ಕೇಂದ್ರ ಕಛೇರಿ ಹುಬ್ಬಳ್ಳಿ ಉಪಾಧ್ಯಕ್ಷರು ಸುನೀಲ. ಹಣಮಣ್ಣವರ ರವರು ಚಿಕ್ಕೋಡಿ ಬಸ್ ನಿಲ್ದಾಣ, ವಿಭಾಗೀಯ ಕಛೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಪರೀಶೀಲಿಸಿದರು.
ಈ ಸಂದರ್ಭದಲ್ಲಿ ಘಟಕದ ನವೀಕರಣ ಕುರಿತು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿ ಬಸ್ ನಿಲ್ದಾಣದಲ್ಲಿ ಶಾಲಾ/ಕಾಲೇಜು ಮಕ್ಕಳಿಗೆ ಮಾತನಾಡಿಸಿ ಉಚಿತ ಬಸ್ ಪಾಸ್ ಕುರಿತು, ಸೌಲಭ್ಯ ಪಡಯಲು ತಿಳಿಸಿ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ವಿತರಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಎಮ್.ಆರ್.ಮುಂಜಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾರಾಯಣ ತಿಮ್ಮಾರಡ್ಡಿ, ಚಿಕ್ಕೋಡಿ ಘಟಕ ವ್ಯವಸ್ಥಾಪಕರು ರಾಜು.ಎಸ್.ಪಾಟೀಲ ಹಾಗೂ ವಿಭಾಗೀಯ ಕಛೇರಿಯ ಸಿಬ್ಬಂದಿಗಳು ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 