ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ
Free electric sewing machine distribution
ವಿಜಯಪುರ. ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ವತಿಯಿಂದ 2024-25 ನೇ ವರ್ಷದಲ್ಲಿ ಮಂಜೂರಾದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಫಲಿನುಭವಿಗಳಿಗೆ ವಿತರಿಸಿದರು.
ಇಂದು ಸೋಮವಾರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಕೋಟಾ ಮತ್ತು ಬಬಲೇಶ್ವರ ತಾಲೂಕುಗಳ ಒಟ್ಟು 76 ವೃತ್ತಿಪರ ಅರ್ಹ ಮಹಿಳಾ ಕುಶಲಕರ್ಮಿಗಳಿಗೆ ಅವರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಸಚಿವರು, ಈ ಯಂತ್ರಗಳನ್ನು ಬಳಸಿಕೊಂಡು ಮಹಿಳೆಯರು ಸ್ವಾಭಿಮಾನಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ.ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ಉಪನಿರ್ದೇಶಕ ಎಸ್. ಎಂ. ಪಾಟೀಲ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 