ಉಚಿತ ಕಣ್ಣಿನ ತಪಾಸಣೆ ಶಿಬಿರ, ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ
Free eye checkup camp, surgery program
ಲೋಕದರ್ಶನ ವರದಿ
ಯರಗಟ್ಟಿ, 30 : ಕಣ್ಣು ಮನುಷ್ಯನ ಪ್ರಮುಖ ಅಂಗವಾಗಿದ್ದು ಇದನ್ನು ಪ್ರತಿಯೊಬ್ಬರು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು.
ಸಮೀಪದ ತಲ್ಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ಪತ್ರಕರ್ತರ ಸಂಘ, ತಾಲೂಕ ಘಟಕ ಯರಗಟ್ಟಿ ಮತ್ತು ಗ್ರಾಮ ಪಂಚಾಯತ, ಜನಪ್ರೀಯ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಾಗೂ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ತೊಂದರೆಯಾದಾಗ ಕೂಡಲೇ ತಜ್ಞ ವೈದ್ಯರಲ್ಲಿ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ನಿವೃತ್ತ ಮುಖ್ಯ ಶಿಕ್ಷಕ ಎ.ವಿ.ಇಂಗಳೆ, ಹಿರಿಯ ನೇತ್ರ ಸಹಾಯುಕ ಪಾಂಡು ತಳವಾರ ಮಾತನಾಡಿ, ಪ್ರತಿಯೊಬ್ಬರೂ ಕಣ್ಣಿನ ಆರೈಕೆ ಮಾಡಿಕೊಳ್ಳಿ ಎಂದು ಹೇಳಿದರು.
ತೊರಗಲ್ಲ ಮಠದ ದೀಪಕ್ ಸ್ವಾಮಿ ಸಾನ್ನಿದ್ಯ ವಹಿಸಿದ್ದರು, ಎಸ್‌ಡಿಎಮ್‌ಸಿ ಅಧ್ಯಕ್ಷ ಶ್ಯಾಮ ಚಿಕಾಕಿ ಅದ್ಯಕ್ಷತೆ ವಹಿಸಿದ್ದರು, ಗ್ರಾಪಂ ಮಾಜಿ ಉಪಾಧ್ಯಕ್ಷ ಬಾಬುಗೌಡ ಅಣ್ಣಿಗೇರಿ, ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಈರಣ್ಣ ಹೂಲ್ಲೂರ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಪ್ಪ ಅಂಗಡಿ, ಮಹಿಳಾ ಸಂಜೀವಿನಿ ವಕ್ಕೂಟ ಅಧ್ಯಕ್ಷೆ ಕಸ್ತೂರಿ ಹೊಸುರ, ಮುಖಂಡ ಶಂಕರಗೌಡ ಪಾಟೀಲ, ಗ್ರಾಪಂ ಮಾಜಿ ಸದಸ್ಯ ಬಸವರಾಜ ಪೂಜೇರ, ನಿವೃತ್ತ ಶಿಕ್ಷಕ ಬಸಪ್ಪ ಲಕ್ಕನ್ನವರ ಇತರರಿದ್ದರು. ಶಿಕ್ಷಕ ಬಸನಗೌಡ ಅಣ್ಣಿಗೇರಿ ಸ್ವಾಗತಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 