ಜು. 13 ರಂದು ಉಚಿತ ನೇತ್ರ ತಪಾಸಣೆ ಶಿಬಿರ
ರಾಣಿಬೆನ್ನೂರ:11 ತಾಲೂಕಿನ ಹಲಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜು. 13 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರವು ಜರುಗಲಿದೆ.
ಶಂಕರ್ ಕಣ್ಣಿನ ಆಸ್ಪತ್ರೆ, ಸ್ವಾಕರವೇ, ಎನ್ ಎಸ್ ಸ್ನೇಹ ಜ್ಯೋತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗಳ ಆಶ್ರಯದಲ್ಲಿ ಶಿಬಿರವು ಜರುಗಲಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ಸಂಘಟಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.