ಸೌಂದತ್ತಿ

ಅ.10ರಂದು ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

ಅ.10ರಂದು ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

ಸವದತ್ತಿ 02: ಅಂದರ ಬಾಳಿಗೆ ಬೆಳಕನ್ನು ನೀಡುವ ನಿಟ್ಟಿನಲ್ಲಿ ಅ.10ರಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. 

ಸ್ಥಳೀಯ ತಾ.ಪಂ ಸಭಾಭವನದಲ್ಲಿ ಶಾಸಕ ವಿಶ್ವಾಸ ವೈದ್ಯರವರ 42ನೇ ಹುಟ್ಟು ಹಬ್ಬದ ಅಂಗವಾಗಿ ವೈದ್ಯ ಪೌಂಡೇಶನವತಿಯಿಂದ ಅ.10ರಿಂದ ಅ.12ರವರೆಗೆ ನಡೆಯುವ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಅರ್ಹ ಫಲಾನುಭವಿಗಳಿಗೆ ಎಲ್ಲ ಸೌಲಭ್ಯಗಳ ಜೊತೆಗೆ ಉಚಿತ ಲೆನ್ಸ್‌ ಅಳವಡಿಸಲಾಗುತ್ತಿದ್ದು, ತಾಲೂಕಿನ ಎಲ್ಲ ನಾಗರೀಕರು ಸಹಕಾರದೊಂದಿಗೆ ಈ ಶಿಬಿರದ ಸೌಲಭ್ಯತೆಗಳನ್ನು ಪಡೆದುಕೊಳ್ಳುವದರ ಜೊತೆಗೆ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದರು. ಫಲಾನುಭವಿಗಳು ಕೂಡಲೆ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಶಸ್ತ್ರ ಚಿಕಿತ್ಸೆಗೂ ಮುನ್ನ ವೈದ್ಯರನ್ನು ಭೇಟಿಯಾಗಿ ತಮ್ಮ ಆರೋಗ್ಯದ ಬಗ್ಗೆ ಪರೀಕ್ಷೆ ಮಾಡಿಸಿಕೊಂಡು ಶಸ್ತ್ರ ಚಿಕಿತ್ಸೆಗೆ ಅರ್ಹತೆಯನ್ನು ಪಡೆದಕೊಳ್ಳಬೇಕು. ನೇತ್ರ ಶಸ್ತ್ರ ಚಿಕಿತ್ಸೆಗೆ ಆಗಮಿಸುವ ಎಲ್ಲ ರೋಗಿಗಳಿಗೆ ವೈದ್ಯ ಪೌಂಡೇಶನವತಿಯಿಂದ ಎಲ್ಲ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತಿದ್ದು, ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಿದೆ ಎಂದರು. 

ಟಿಎಚ್‌ಓ ಡಾ.ಶ್ರೀಪಾದ ಸಬನೀಸ ಮಾತನಾಡಿ, ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದ ಸಂಪೂರ್ಣ ತಯಾರಿಯನ್ನು ಮಾಡಿಕೊಳ್ಳಲಾಗಿದ್ದು, 500ರಿಂದ 700 ಜನರಿಗೆ ಉಚಿತ ನೇತ್ರ ಶಸ್ತ್ರ ಚಿಕಿತ್ಸೆಯನ್ನು ನೀಡುವ ಗುರಿ ಹೊಂದಲಾಗಿದೆ ಎಂದರು.  

ಮುಖ್ಯವೈದ್ಯಾಧಿಕಾರಿ ಡಾ.ಎಚ್‌.ಎಮ್‌.ಮಲ್ಲನಗೌಡರ ಮಾತನಾಡಿ, ಶಿಬಿರದ ಆಯೋಜನೆಯಲ್ಲಿ ತಾಲೂಕಿನ ಎಲ್ಲ ಇಲಾಖೆಯವರ ಸಹಕಾರ ಬಹುಮುಖ್ಯವಾಗಿದ್ದು, ಅ.10ರಿಂದ ಅ.12ರವರೆಗೆ ನಿರಂತರವಾಗಿ ವಿವಿಧ ಇಲಾಖೆಗಳ ಸಿಬ್ಬಂದಿಯವರು ಸಕ್ರೀಯವಾಗಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದರು. 

ವೈದ್ಯ ಪೌಂಡೇಶನ್ ಸವದತ್ತಿ ಹಾಗೂ ಜನಹಿತ ಐಕೇರ್ ಸೆಂಟರ್ ಬೆಂಗಳೂರು, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ. ಸವದತ್ತಿ ಸಾರ್ವಜನಿಕ ಆಸ್ಪತ್ರೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸವದತ್ತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. 

ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಯರಗಟ್ಟಿ ತಹಸೀಲ್ದಾರ ಎಮ್‌.ಎನ್‌.ಮಠದ, ಬಿಇಓ ಮೋಹನ ದಂಡಿನ, ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ, ಡಾ.ಸುರೇಶ ಹಿತ್ತಲಮನಿ ಇತರರು ಉಪಸ್ಥಿತರಿದ್ದರು. 

ಅಶೋಕ ಮುರಗೋಡ ನಿರೂಪಿಸಿ ವಂದಿಸಿದರು. 


ಸುದ್ದಿ ಓದಿ