ಉಚಿತ ಆರೋಗ್ಯ ತಪಾಸಣೆ ಶಿಬಿರ: 200 ಜನರಿಗೆ ಲಾಭ
Free health check-up camp: 200 people benefited
ಜಮಖಂಡಿ 12: ತಾಲೂಕಿನ ಮರೇಗುದ್ದಿ ಗ್ರಾಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ನಸಿಂರ್ಗ್ ಮಹಾವಿದ್ಯಾಲಯ ಮತ್ತು ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಾಡಲಾಯಿತು.
ಉಚಿತ ಆರೋಗ್ಯ ಶಿಬಿರವನ್ನು ಬಿ.ಎಲ್.ಡಿ.ಇ ಸಂಸ್ಥೆ ಆಡಳಿತಾಧಿಕಾರಿ ಪ್ರೋ.ಎಸ್.ಎಚ್. ಲಗಳಿ ಉದ್ಘಾಟಿಸಿ, ನಂತರ ಮಾತನಾಡಿದ ಅವರು, ಗ್ರಾಮಸ್ಥರರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಗಂಭೀರ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ನಮ್ಮ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವದು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎ, ಎಂ, ಶಹಾ ಮಾತನಾಡಿ,ಮುಂಬರುವ ದಿನಗಳಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ 100 ಹಾಸಿಗೆಗಳ ಆಸ್ಪತ್ರೆಯನ್ನು ಜಮಖಂಡಿಯಲ್ಲಿ ನಿರ್ಮಿಸುವ ಯೋಜನೆಯು ಸಿದ್ದವಾಗಿದ್ದು, ಶಿಕ್ಷಣ ಸಹಕಾರಿ ಹಾಗೂ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ ಎಂದರು.
ವೇದಿಕೆಯಲ್ಲಿ ಮರೇಗುದ್ದಿ ಗ್ರಾಮದ ಎಮ್,ಆರ್, ಅಥನಿ, ಬಸಪ್ಪ ಬಾರಿಕಾಯಿ, ವೈದ್ಯರಾದ ಡಾ, ಅವಿನಾಶ ಜುಗತಿ, ಡಾ, ಸ್ನೇಹಲ್ ಪಾಟೀಲ, ಡಾ, ವೈಣವಿ ಮತ್ತು ಡಾ, ಸೋಗರವಾವಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು 200 ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು. ನಸಿಂರ್ಗ್ ಮಹಾವಿದ್ಯಾಲಯ ಪ್ರಾಚಾರ್ಯ ಡಾ, ವೀರಭದ್ರ್ಪ ಜಿ. ಮೇಂಡಗುದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಷಾ ಕಾವೇರಿ ಪ್ರಾರ್ಥಿಸಿದರು. ಶ್ರೀನಿವಾಸ ಕಟ್ಟಿಮನಿ ನಿರೂಪಿಸಿದರು. ಐ.ಎಸ್. ನ್ಯಾಮಗೌಡ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 