ನಾಳೆ ಭಗೀರಥ ಉಪ್ಪಾರ ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp by the Bhagiratha Uppara Sangha tomorrow
ಬಳ್ಳಾರಿ. ಸೆ. 25 : ತಾಲೂಕು ಉಪ್ಪಾರ ನೌಕರರ ಹಾಗೂ ವೃತ್ತಿಪರ ನೌಕರರ ಸಂಘ (ರಿ), ಬಳ್ಳಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ನಗರದ ಬಿಗೋನಾಳ್ ಹತ್ತಿರದ ಮಣಿಕಂಠ ನಗರದಲ್ಲಿನ ಸೆಪ್ಟೆಂಬರ್ 27ರಂದು ಭಗೀರಥ ವಿದ್ಯಾರ್ಥಿ ನಿಲಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವ ಅಧ್ಯಕ್ಷರಾದ ಉಪ್ಪಾರ್ ಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 10-00 ಗಂಟೆಯಿಂದ ಮಧ್ಯಾಹ್ನ 1-00 ಗಂಟೆಯವರೆಗೆ ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 9 ರಲ್ಲಿರಿವ ಭಗೀರಥ ವಿದ್ಯಾರ್ಥಿ ನಿಲಯ, ಅಯ್ಯಪ್ಪ ದೇವಸ್ಥಾನ ಹತ್ತಿರದಲ್ಲಿ ನಡೆಯಲಿರುವ ಈ ಆರೋಗ್ಯ ತಪಾಸಣಾ ಶಿಬಿರಕ್ಕೆ ಬಳ್ಳಾರಿ ನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆಯಬೇಕೆಂದು ಸಂಘದ ವತಿಯಿಂದ ಮನವಿ ಮಾಡಲಾಗಿದೆ,
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 